ಕರ್ನಾಟಕ ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಕೇವಲ ಶೇ.44ರಷ್ಟು ಸಿಬ್ಬಂದಿ, ರೈತರಿಗೆ ತಲುಪುತ್ತಿಲ್ಲ ಯೋಜನೆಗಳು
ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಮುಂಗಾರು ಆರಂಭಗೊಂಡಿದ್ದು, ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿರುವುದರಿಂದ ರೈತರು ಹರ್ಷಗೊಂಡಿದ್ದಾರೆ.
Published: 05th June 2022 10:25 AM | Last Updated: 05th June 2022 10:29 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಮುಂಗಾರು ಆರಂಭಗೊಂಡಿದ್ದು, ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿರುವುದರಿಂದ ರೈತರು ಹರ್ಷಗೊಂಡಿದ್ದಾರೆ.
ಆದರೆ ರಾಜ್ಯ ಕೃಷಿ ಇಲಾಖೆಯ ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ಶೇಕಡಾ 50ಕ್ಕಿಂತ ಕಡಿಮೆ ನೌಕರರು ಕೆಲಸ ಮಾಡುತ್ತಿರುವ ಕೃಷಿ ಇಲಾಖೆಯು ತೀವ್ರ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದೆ. ಇದು ಇಲಾಖೆಯ ಕಾರ್ಯನಿರ್ವಹಣೆಯ ಮೇಲೆ ಋಣಾತ್ಮಕ ಪರಿಣಾಮ ಬೀರಿದೆ. ಇದರಿಂದ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ಮತ್ತು ರೈತರಿಗೆ ದೊಡ್ಡ ಸಂಖ್ಯೆಯಲ್ಲಿ ಪರಿಣಾಮ ಬೀರಿದೆ.
ವಿವಿಧ ವೃಂದಗಳ ಇಲಾಖೆಯ ಮಂಜೂರಾದ ಸಿಬ್ಬಂದಿ ಸಂಖ್ಯೆ 9,007 ಹುದ್ದೆಗಳಾಗಿದ್ದು, ಅದರಲ್ಲಿ 4,020 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಅಂದರೆ ಶೇಕಡಾ 44ರಷ್ಟು ಸಿಬ್ಬಂದಿ ಮಾತ್ರ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವುಗಳಲ್ಲಿ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ನೌಕರರು ಪ್ರಮುಖರಾಗಿರುತ್ತಾರೆ. ಹೆಚ್ಚಿನ ಖಾಲಿ ಹುದ್ದೆಗಳು ಈ ಎರಡು ಕೇಡರ್‌ಗಳಿಂದ ಬಂದವುಗಳಾಗಿವೆ. ಗ್ರೂಪ್ ಬಿ ಕೇಡರ್‌ನಲ್ಲಿ 4,091 ಮಂಜೂರಾದ ಹುದ್ದೆಗಳಲ್ಲಿ 1,781 ಮಾತ್ರ ಭರ್ತಿಯಾಗಿದೆ.
300 ಜನರನ್ನು ನೇಮಿಸಿಕೊಳ್ಳುವ ರಾಜ್ಯ ಸರ್ಕಾರದ ಕ್ರಮವು ವಾಸ್ತವಿಕವಾಗಿ ಅಗತ್ಯವಿರುವ ಸಾಮರ್ಥ್ಯಕ್ಕಿಂತ ಕಡಿಮೆ ಇರುವುದರಿಂದ ಅಷ್ಟೇನೂ ವ್ಯತ್ಯಾಸವನ್ನುಂಟುಮಾಡುತ್ತಿಲ್ಲ. ಕರ್ನಾಟಕದಲ್ಲಿ ಸುಮಾರು 750 ರೈತ ಸಂಪರ್ಕ ಕೇಂದ್ರಗಳಿವೆ (RSK), ಹೋಬಳಿ ಮಟ್ಟದಲ್ಲಿ ಕನಿಷ್ಠ ಒಂದನ್ನು ಹೊಂದಿದೆ. ಪ್ರತಿ ಆರ್‌ಎಸ್‌ಕೆಯು ಸಹಾಯಕ ಕೃಷಿ ಅಧಿಕಾರಿ ಮತ್ತು ಕೃಷಿ ಸಹಾಯಕರನ್ನು ಹೊಂದಿರಬೇಕು, ಅವರು ಹಳ್ಳಿಗಳಲ್ಲಿ ಅಂತಿಮ ಫಲಾನುಭವಿಯನ್ನು ತಲುಪುವಲ್ಲಿ ನಿರ್ಣಾಯಕರಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ. ಕೃಷಿ ಯಂತ್ರೋಪಕರಣಗಳ ಬಳಕೆಗೆ ಉತ್ತೇಜನ ನೀಡಲು 500 ಕೋಟಿ ರೂಪಾಯಿ ಮಂಜೂರು ಮಾಡುವ ಮೂಲಕ ರೈತ ಶಕ್ತಿ ಯೋಜನೆಯನ್ನೂ ಘೋಷಿಸಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂಪಾಯಿ, ಕೃಷಿ ಯಂತ್ರೋಪಕರಣಗಳ ಬಳಕೆಗೆ ಉತ್ತೇಜನ ನೀಡಲು 500 ಕೋಟಿ ರೂಪಾಯಿ ಮಂಜೂರು ಮಾಡುವ ಮೂಲಕ ರೈತ ಶಕ್ತಿ ಯೋಜನೆಯನ್ನೂ ಘೋಷಿಸಿದ್ದರು.ಸಣ್ಣ ರೈತರಿಗೆ ಪ್ರತಿ ಎಕರೆಗೆ 250 ರೂಪಾಯಿ ಡೀಸೆಲ್ ಸಬ್ಸಿಡಿಯನ್ನೂ ಸಿಎಂ ಮಂಜೂರು ಮಾಡಿದ್ದರು.
ಫಲಾನುಭವಿಗಳನ್ನು ತಲುಪದ ರೈತ ಯೋಜನೆಗಳು: ಅನೇಕ ಕೃಷಿ ಸಂಬಂಧಿತ ಯೋಜನೆಗಳು ಹೆಚ್ಚಿನ ಸಂಖ್ಯೆಯ ರೈತರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಯೋಜನವನ್ನು ನೀಡುತ್ತವೆ. ರಸಗೊಬ್ಬರ ಸಬ್ಸಿಡಿ ನೀಡುವುದು ಸೇರಿದಂತೆ ಗ್ರಾಮಗಳಲ್ಲಿ ಫಲಾನುಭವಿಗಳನ್ನು ತಲುಪುವಲ್ಲಿ ಪ್ರಮುಖ ಪಾತ್ರ ವಹಿಸುವವರು ತಳಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳು. ಸಿಬ್ಬಂದಿ ಕೊರತೆಯೊಂದಿಗೆ ಸರಕಾರದ ಗಡುವಿನೊಳಗೆ ರೈತರಿಗೆ ಯೋಜನೆಗಳನ್ನು ತಲುಪಿಸುವುದು ಹೇಗೆ ಎಂದು ಹೆಸರು ಹೇಳಲಿಚ್ಛಿಸದ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.
ಇತ್ತೀಚೆಗಷ್ಟೇ ಕೃಷಿ ಇಲಾಖೆಯು ಕೃಷಿ ವಿಶ್ವ ವಿದ್ಯಾಲಯಗಳಿಂದ 3 ಸಾವಿರ ಡಿಪ್ಲೊಮಾ ಪದವೀಧರರನ್ನು ಕೃಷಿ ಸಹಾಯಕರನ್ನಾಗಿ ನೇಮಕ ಮಾಡಿಕೊಳ್ಳಲು ಪ್ರಸ್ತಾವನೆ ಕಳುಹಿಸಿದ್ದು, ಎರಡು ಪಂಚಾಯಿತಿಗೆ ಒಬ್ಬರನ್ನು ನೇಮಕ ಮಾಡಿಕೊಳ್ಳಲು ಪ್ರಸ್ತಾವನೆ ಕಳುಹಿಸಿತ್ತು. ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗುತ್ತಿದೆ ಎಂಬ ಕಾರಣಕ್ಕೆ ಹಣಕಾಸು ಇಲಾಖೆ ಪ್ರಸ್ತಾವನೆಯನ್ನು ಕೈಬಿಟ್ಟಿದೆ.
ಕಡಿಮೆ ಗುಣಮಟ್ಟದ ಬೀಜಗಳ ಬಗ್ಗೆ ಅರಿವು ಮೂಡಿಸಲು, ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಹಾಯ ಮಾಡಲು, ಮಣ್ಣಿನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಇನ್ನೂ ಅನೇಕ ವಿಷಯಗಳಿಗೆ ರೈತರನ್ನು ತಲುಪಬೇಕು. ಸಿಬ್ಬಂದಿ ಕೊರತೆಯಿಂದ ನಿರ್ಲಕ್ಷ್ಯ ಮಾಡಿದಂತಾಗುತ್ತದೆ ಎಂದು ಇನ್ನೊಬ್ಬ ಅಧಿಕಾರಿ ಹೇಳುತ್ತಾರೆ.