ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯಮ ಉಲ್ಲಂಘನೆ: ಕೇರಳ ಪ್ರವಾಸಿಗರಿಗಾಗಿ ಅಧಿಕಾರಿಗಳ ಹುಡುಕಾಟ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ವಚ್ಛ ಭಾರತ್, ಸಾರ್ವಜನಿಕ ಶೌಚಾಲಯ ಬಳಕೆ ಮತ್ತು ಪರಿಸರ ಉಳಿಸುವ ಬಗ್ಗೆ ವ್ಯಾಪಕ ಪ್ರಚಾರ ಮಾಡುತ್ತಿದ್ದರೂ, ಕೇರಳದಿಂದ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯಕ್ಕೆ ಬಂದಿದ್ದ ಪ್ರವಾಸಿಗರ ಗುಂಪೊಂದು ಹಲವು ಬಾರಿ ನಿಯಮ ಉಲ್ಲಂಘಿಸಿ, ದುರ್ವರ್ತನೆ ತೋರಿದ ಘಟನೆ ಇದೀಗ ಬೆಳಕಿಗೆ ಬಂದಿದೆ.
Published: 05th June 2022 11:42 AM | Last Updated: 06th June 2022 02:18 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ವಚ್ಛ ಭಾರತ್, ಸಾರ್ವಜನಿಕ ಶೌಚಾಲಯ ಬಳಕೆ ಮತ್ತು ಪರಿಸರ ಉಳಿಸುವ ಬಗ್ಗೆ ವ್ಯಾಪಕ ಪ್ರಚಾರ ಮಾಡುತ್ತಿದ್ದರೂ, ಕೇರಳದಿಂದ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯಕ್ಕೆ ಬಂದಿದ್ದ ಪ್ರವಾಸಿಗರ ಗುಂಪೊಂದು ಹಲವು ಬಾರಿ ನಿಯಮ ಉಲ್ಲಂಘಿಸಿ, ದುರ್ವರ್ತನೆ ತೋರಿದ ಘಟನೆ ಇದೀಗ ಬೆಳಕಿಗೆ ಬಂದಿದೆ.
ಕೆಎಲ್-58-ಎಎ-4049 ಸಂಖ್ಯೆಯ ವಾಹನದಲ್ಲಿ ಬಂದಿರುವ ಕೇರಳದ ಪ್ರವಾಸಿಗರ ಗುಂಪು, ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯಮಗಳ ಉಲ್ಲಂಘಿಸಿ ಬಯಲು ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕೆಲ ಪ್ರವಾಸಿಗರು ಇದಕ್ಕೆ ವಿರೋಧ ವ್ಯಕ್ತಪಡಿಸಾದ ಅವರಿಗೆ ಬೆದರಿಕೆಗಳನ್ನೂ ಹಾಕಿದ್ದಾರೆಂದು ತಿಳಿದುಬಂದಿದೆ.
ಈ ಸಂಬಂಧ ಅರಣ್ಯ ಇಲಾಖೆಗೆ ಪ್ರತ್ಯದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಧಿಕಾರಿಗಳು, ಇದೀಗ ನಿಯಮ ಉಲ್ಲಂಘಿಸಿದ ಕೇರಳ ಪ್ರವಾಸಿಗರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಇದನ್ನೂ ಓದಿ: ಬಂಡೀಪುರದಲ್ಲಿ ಅಪರೂಪದ ದೃಶ್ಯ ಸೆರೆ: ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ
ಹಲವು ನಿಯಮಗಳನ್ನು ಉಲ್ಲಂಘಿಸಿರುವುದರಿಂದ ದಂಡ ವಿಧಿಸುವುದಲ್ಲದೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಟಿಆರ್‌ನಿಂದ ದಂತಗಳನ್ನು ಕಳವು
ಸಿಐಡಿ ಅರಣ್ಯ ಸಂಚಾರಿ ದಳವು ಐವರು ಆರೋಪಿಗಳನ್ನು ಬಂಧಿಸಿ ದಂತ ಮತ್ತು ವಾಹನವನ್ನು ವಶಪಡಿಸಿಕೊಂಡ ಒಂದು ದಿನದ ನಂತರ, ಭದ್ರಾ ಹುಲಿ ಸಂರಕ್ಷಿತ ಅರಣ್ಯದಿಂದ ದಂತಗಳು ಕಳವಾಗಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಂಧಿತ ಆರೋಪಿಗಳ ತಪ್ಪೊಪ್ಪಿಗೆ ಆಧಾರದ ಮೇಲೆ ಆನೆಯ ಅವಶೇಷಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.