ಹೊಸಪೇಟೆ: ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಡಿಕೊಂಡ ಯುವಕರು!
ದಿವಂಗತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿ 7 ತಿಂಗಳು ಕಳೆದಿದ್ದು ಅಭಿಮಾನಿಗಳ ಅಭಿಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ.
Published: 05th June 2022 08:24 PM | Last Updated: 06th June 2022 02:12 PM | A+A A-

ಬಡಿದಾಡಿಕೊಂಡ ಯುವಕರು
ವಿಜಯನಗರ: ದಿವಂಗತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿ 7 ತಿಂಗಳು ಕಳೆದಿದ್ದು ಅಭಿಮಾನಿಗಳ ಅಭಿಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ.
ಆದರೆ ವಿಜಯನಗರದ ಹೊಸಪೇಟೆಯ ತಾಲೂಕು ಕಚೇರಿ ಸಮೀಪದ ಪುನೀತ್ ರಾಜಕುಮಾರ್ ವೃತ್ತದಲ್ಲಿ ಅವರ ಕಂಚಿನ ಪುತ್ಥಳಿ ಅನಾವಣದ ಸಂದರ್ಭದಲ್ಲಿ ಅಭಿಮಾನಿಗಳು ಬಡಿದಾಡಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ವೇಳೆ ಕುರ್ಚಿಗಾಗಿ ಯುವಕ ಮಧ್ಯೆ ಗಲಾಟೆ ಶುರುವಾಗಿದೆ. ಬಳಿಕ ಕುರ್ಚಿಯಿಂದ ಹೊಡೆದಾಡಿಕೊಂಡಿದ್ದಾರೆ.
ಕೂಡಲೇ ಅಲರ್ಟ್ ಆದ ಪೊಲೀಸರು ಯುವಕರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಇನ್ನು ಸಮಾರಂಭದಲ್ಲಿ ಹತ್ತು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ.