
ಸಾಂದರ್ಭಿಕ ಚಿತ್ರ
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ಮೂಲದ ದರ್ಶನ್ ಗೌಡ ನನ್ನು ಈ ಹಿಂದೆ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಸಚಿವ ಡಾ. ಅಶ್ವತ್ಥ ನಾರಾಯಣ ಹೆಸರು ಹೇಳಿದ್ದ ಬಳಿಕ ಆತನನ್ನು ಸಿಐಡಿ ಅಧಿಕಾರಿಗಳು ಬಿಟ್ಟು ಕಳುಸಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಮರು ಪರೀಕ್ಷೆ ರದ್ದತಿಗೆ ಆಗ್ರಹ: ಪ್ರತಿಭಟನೆಗಿಳಿದ ನೂರಾರು ಅಭ್ಯರ್ಥಿಗಳು
ಅಲ್ಲದೆ ಸಚಿವ ಅಶ್ವತ್ಥ್ ನಾರಾಯಣ ಹಾಗೂ ಅವರ ಸಹೋದರ ಸತೀಶ್ ವಿರುದ್ಧ ಹಗರಣದ ಆರೋಪ ಮಾಡಿದ್ದರು. ಇನ್ನು ನಿನ್ನೆ ದರ್ಶನ್ ಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ಇಂದು ಅಧಿಕೃತವಾಗಿ ಬಂಧಿಸಿದ್ದಾರೆ.
ಇದೇ ವೇಳೆ ದರ್ಶನ್ ಗೌಡ ಸೇರಿದಂತೆ ಹೊಸದಾಗಿ 3 ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಹಾಗೂ ಮೋಹನ್ ನನ್ನು ಪ್ರತ್ಯೇಕವಾಗಿ ಮೂರು ಪ್ರಕರಣಗಳನ್ನು ದಾಖಲಿಸಿ ಬಂಧಿಸಿದ್ದಾರೆ.