ಮಂಗಳೂರು: ಹಿಜಾಬ್ ಧರಿಸಲು ಅನುಮತಿ ಕೋರಿ ಪ್ರತಿಭಟನೆ ನಡೆಸಿದ್ದ 23 ವಿದ್ಯಾರ್ಥಿನಿಯರು ಅಮಾನತು
ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕಳೆದ ವಾರ ಪ್ರತಿಭಟನೆ ನಡೆಸಿದ್ದ 23 ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿದೆ.
Published: 07th June 2022 03:30 PM | Last Updated: 07th June 2022 04:54 PM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕಳೆದ ವಾರ ಪ್ರತಿಭಟನೆ ನಡೆಸಿದ್ದ 23 ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿದೆ.
"ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಆದ್ದರಿಂದ ಅವರನ್ನು ಸೋಮವಾರ ಕಾಲೇಜ್ ನಿಂದ ಅಮಾನತುಗೊಳಿಸಲಾಗಿದೆ" ಎಂದು ಪುತ್ತೂರು ಬಿಜೆಪಿ ಶಾಸಕ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ(ಸಿಡಿಸಿ) ಅಧ್ಯಕ್ಷ ಸಂಜೀವ ಮಠಂದೂರು ಅವರು ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ.
ಇದನ್ನು ಓದಿ: ಒಮ್ಮೆ ಪಾಕಿಸ್ತಾನಕ್ಕೆ ಹೋಗಿ ಬನ್ನಿ, ಭಾರತದ ಮಹತ್ವ ತಿಳಿಯುತ್ತೆ: ಹಿಜಾಬ್ ವಿದ್ಯಾರ್ಥಿನಿಯರಿಗೆ ಯುಟಿ ಖಾದರ್
ಮೂಲಗಳ ಪ್ರಕಾರ, ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು, ಸ್ಕಾರ್ಫ್ ಧರಿಸಲು ತಮಗೆ ಅನುಮತಿ ನೀಡಬೇಕೆಂದು ಒತ್ತಾಯಿಸಿದ್ದರು.
ಸೋಮವಾರ ಸಿಡಿಸಿ ಸಭೆ ನಡೆಸಿ ಅವರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ.