ಕೋಲಾರ: ಮಾಜಿ ಶಾಸಕ ಕೊತ್ತನೂರು ಮಂಜುನಾಥ್ ಬಲಗೈ ಬಂಟ, ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಹತ್ಯೆ
ಹಾಡಹಗಲೇ ಮುಳಬಾಗಿಲು ನಗರಸಭೆ ಸದಸ್ಯನನ್ನು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
Published: 07th June 2022 08:33 AM | Last Updated: 07th June 2022 02:20 PM | A+A A-

ಹತ್ಯೆಯಾದ ಜಗನ್ ಮೋಹನ್ ರೆಡ್ಡಿ
ಕೋಲಾರ: ಹಾಡಹಗಲೇ ಮುಳಬಾಗಿಲು ನಗರಸಭೆ ಸದಸ್ಯನನ್ನು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಗನ್ ಮೋಹನ್ ರೆಡ್ಡಿ ಹತ್ಯೆ ನಡೆದಿದೆ. ಇಂದು ಬೆಳಿಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತ ಗುಂಪೊಂದು ಜಗನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಜಗನ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣ ತ್ಯಜಿಸಿದ್ದಾರೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗ ಮೋಹನ್ ಮೇಲೆ ನಡೆದ ದಾಳಿಯಿಂದ ಕೋಲಾರ ಬೆಚ್ಚಿಬಿದ್ದಿದೆ.
ಇನ್ನೂ ದೇವಾಸ್ಥಾನದಲ್ಲಿರುವ ಸಿಸಿಟಿವಿ, ಹತ್ಯೆಯ ದೃಶ್ಯ ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜಗನ್ ಮೋಹನ್ ರೆಡ್ಡಿ ಅವರು ಮುತ್ಯಾಲಪೇಟೆ ವಾರ್ಡ್ನಿಂದ ಸತತ ಎರಡನೇ ಬಾರಿಗೆ ಚುನಾಯಿತರಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರು, ಅವರು ಮಾಜಿ ಶಾಸಕ ಮಂಜುನಾಥ್ ಅವರ ಆಪ್ತರಾಗಿದ್ದರು.
ಎರಡು ದಿನಗಳ ಹಿಂದೆ ಜಗನ್ ಮೋಹನ್ ರೆಡ್ಡಿ ಅವರ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಯೋಜಿಸಿದ್ದರು. ಕೊಲೆಗೆ ಕಾರಣ ತಿಳಿದುಬಂದಿಲ್ಲ, ಪೊಲೀಸರು ವಿವಿಧ ಕೋನಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ, ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಳಬಾಗಿಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಕಾಂಗ್ರೆಸ್ ಎಂಎಲ್ ಸಿ ಅನಿಲ್ ಕುಮಾರ್, ಮಾಜಿ ಶಾಸಕ ಕೊತ್ತನೂರು ಮಂಜುನಾಥ್ ಸೇರಿದಂತೆ ಮುಳಬಾಗಲಿನ ಪ್ರಮುಖ ಮುಖಂಡರು ಸ್ಥಳಕ್ಕೆ ದಾವಿಸಿದ್ದರು.