ಹಾಸನ: ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದ ಸರ್ಕಾರ

ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಹಾಸನ ನಗರಸಭೆ ಜೆಡಿಎಸ್ ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ವಹಿಸಿಕೊಂಡಿದೆ.

Published: 07th June 2022 08:38 PM  |   Last Updated: 07th June 2022 08:38 PM   |  A+A-


Two men murdered in two separate incidents

ಸಾಂದರ್ಭಿಕ ಚಿತ್ರ

The New Indian Express

ಹಾಸನ: ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಹಾಸನ ನಗರಸಭೆ ಜೆಡಿಎಸ್ ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ವಹಿಸಿಕೊಂಡಿದೆ.

ನಾಲ್ವರು ಸದಸ್ಯರ ಸಿಐಡಿ ತಂಡ ಮಂಗಳವಾರ ಹಾಸನ ನಗರದ ಹೊಸಲೈನ್ ರಸ್ತೆಯಲ್ಲಿರುವ ಲಾಡ್ಜ್ ಅನ್ನು ಸೀಜ್ ಮಾಡಿದ್ದು, ಕೊಲೆಗಾರರು ಅಪರಾಧ ಎಸಗಿದ ನಂತರ ರಾತ್ರಿ ಈ ಹೋಟೆಲ್ ನಲ್ಲಿ ತಂಗಿದ್ದರು.

ಇದನ್ನು ಓದಿ: ಹಾಸನ: ಕೌನ್ಸಿಲರ್ ಹತ್ಯೆ ಪ್ರಕರಣ; ಇಬ್ಬರ ಬಂಧನ

ಪ್ರಶಾಂತ್ ನಾಗರಾಜ್ ಹತ್ಯೆಗೆ ಸಂಚು ರೂಪಿಸಿದ್ದ ಲಾಡ್ಜ್‌ನಲ್ಲಿನ ಹಾರ್ಡ್ ಡಿಸ್ಕ್ ಮತ್ತು ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಸಹ ಸಿಐಡಿ ವಶಪಡಿಸಿಕೊಂಡಿದೆ. ಸಿಐಡಿ ಅಧಿಕಾರಿಗಳು ಪ್ರಶಾಂತ್ ನಾಗರಾಜ್ ಅವರ ಮನೆಗೆ ಭೇಟಿ ನೀಡಿದ್ದು, ಅವರ ಪತ್ನಿಯಿಂದ ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ. ಬಳಿಕ ಪ್ರಶಾಂತ್ ನಾಗರಾಜ್ ಹತ್ಯೆಗೀಡಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕೆಲ ಪೊಲೀಸ್ ಅಧಿಕಾರಿಗಳು ದುಷ್ಕರ್ಮಿಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳನ್ನು ಸಹ ಪ್ರಶ್ನಿಸಿದ್ದಾರೆ ಮತ್ತು ಅವರ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಬಂಧಿತರಾಗಿದ್ದ ಸಂತೋಷ್ ಮತ್ತು ವಿಶ್ವನಾಥ್ ಅವರನ್ನು ಸ್ಥಳೀಯ ಪೊಲೀಸರು ಸಿಐಡಿಗೆ ಒಪ್ಪಿಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಲ್ಲಾ 7 ಆರೋಪಿಗಳನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.


Stay up to date on all the latest ರಾಜ್ಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp