ರಾಕೇಶ್ ಟಿಕಾಯತ್ ಮೇಲೆ ಮಸಿ ದಾಳಿ ಪ್ರಕರಣ: ಮಹಿಳೆ ಬಂಧನ
ಇತ್ತೀಚೆಗಷ್ಟೇ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹೈಗ್ರೌಂಡ್ಸ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Published: 07th June 2022 08:00 AM | Last Updated: 07th June 2022 02:19 PM | A+A A-

ರಾಕೇಶ್ ಟಿಕಾಯತ್ ಮೇಲೆ ಮಸಿ ದಾಳಿ ನಡೆಸಿರುವುದು.
ಬೆಂಗಳೂರು: ಇತ್ತೀಚೆಗಷ್ಟೇ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹೈಗ್ರೌಂಡ್ಸ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಹೆಬ್ಬಾಳ ನಿವಾಸಿ ಉಮಾದೇವಿ ಎಂದು ಗುರುತಿಸಲಾಗಿದೆ, ಪ್ರಕರಣ ಸಂಬಂಧ ಈ ಹಿಂದೆ ಆರೋಪಿಗಳಾದ ಭರತ್ ಶೆಟ್ಟಿ, ಪ್ರದೀಪ್ ಹಾಗೂ ಶಿವಕುಮಾರ್ ಎಂಬುವವರನ್ನು ವಿಚಾರಣೆಗೊಳಪಡಿಸಿದ್ದರು. ತನಿಖೆ ವೇಳೆ ಉಮಾದೇವಿ ಕೈವಾಡ ಕಂಡು ಬಂದಿದೆ. ಹಾಗಾಗಿ, ಪೊಲೀಸರು ಉಮಾದೇವಿಯನ್ನ ಬಂಧಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದ ವ್ಯಕ್ತಿ ಹತ್ಯೆ ಪ್ರಕರಣದ ಅಪರಾಧಿ!
ಘಟನೆ ದಿನ ಉಮಾದೇವಿ ಮುಂದೆ ನಿಂತು ಕೃತ್ಯ ನಡೆಸಿದ್ದರು ಹೇಳಲಾಗುತ್ತಿದೆ. ಅಲ್ಲದೆ, ಉಮಾದೇವಿ ಮನೆ ಮೇಲೆ ಶನಿವಾರ ದಾಳಿ ನಡೆಸಿ ಪೊಲೀಸರಿಗೆ ಮಾರಾಕಾಸ್ತ್ರಗಳು ದೊರೆತಿವೆ. ಸದ್ಯ ಉಮಾದೇವಿಯನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಮೇ 30 ರಂದು ಪತ್ರಿಕಾಗೋಷ್ಠಿ ನಡೆಸಲು ಪ್ರೆಸ್ ಕ್ಲಬ್ ಬಂದಿದ್ದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಟಿಕಾಯತ್ ಮೇಲೆ ಹಲ್ಲೆ ನಡೆಸಲಾಗಿತ್ತು.
ತನಿಖೆ ವೇಳೆ ಪ್ರಕರಣದಲ್ಲಿ ಉಮಾದೇವಿ ಪಾತ್ರ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಭಾನುವಾರ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ವಿಚಾರಣೆ ವೇಳೆ ಮಹಿಳೆ ತಪ್ಪೊಪ್ಪಿಕೊಂಡಿದ್ದು, ಇದರ ಆಧಾರದ ಮೇಲೆ ಸೋಮವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.