ಕೋಮು ಉದ್ವಿಗ್ನತೆ: ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಸಿಸಿಟಿವಿ ಕ್ಯಾಮರಾ ಕಣ್ಗಾವಲು
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ಇನ್ನೂ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಬಿಬಿಎಂಪಿ ಸಮನ್ವಯದೊಂದಿಗೆ ಪೊಲೀಸ್ ಇಲಾಖೆ ವಿವಾದಿತ ಸ್ಥಳದ ಸುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ.
Published: 10th June 2022 06:18 PM | Last Updated: 10th June 2022 07:23 PM | A+A A-

ಈದ್ಗಾ ಮೈದಾನ
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ಇನ್ನೂ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಬಿಬಿಎಂಪಿ ಸಮನ್ವಯದೊಂದಿಗೆ ಪೊಲೀಸ್ ಇಲಾಖೆ ವಿವಾದಿತ ಸ್ಥಳದ ಸುತ್ತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ನಿರ್ಧರಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಈ ಮಹತ್ವದ ನಿರ್ಣಯಕ್ಕೆ ಬಂದಿದ್ದು, ಇಲಾಖೆಯು ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ನಿರ್ಧಾರಕ್ಕೆ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಬಿಬಿಎಂಪಿಗೆ ದಾಖಲೆ ಸಲ್ಲಿಸಿದ ಮುಸ್ಲಿಂ ಅಸೋಸಿಯೇಷನ್!!
ವಿವಾದಿತ ಪ್ರದೇಶದ ಸುತ್ತಲೂ ಹನ್ನೆರಡು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಕ್ಯಾಮರಾಗಳು 4 ಎಂಪಿ ಜೂಮ್ ಮತ್ತು 4 ಕೆ ಸ್ಪಷ್ಟತೆ ವೈಶಿಷ್ಟ್ಯದೊಂದಿಗೆ ಇರಲಿದೆ. ಮೈದಾನದ ಆವರಣದಲ್ಲೇ ಮಾನಿಟರ್‌ಗೆ ಸಂಪರ್ಕಗೊಳ್ಳುತ್ತದೆ. ಚಾಮರಾಜಪೇಟೆ ಪೊಲೀಸ್ ಠಾಣೆಯು ಸಿಸಿಟಿವಿ ದೃಶ್ಯಗಳಿಗೆ ಪ್ರವೇಶವನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.
ಈ ವಿವಾದಿತ ಜಾಗ ಹಿಂದೂ-ಪರ ಗುಂಪು ಮತ್ತು ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್, ಕರ್ನಾಟಕ, ಮೈದಾನದ ಮೇಲಿನ ಹಕ್ಕುಗಳ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ. ಆಸ್ತಿ ಪಾಲಿಕೆಗೆ ಸೇರಿದ್ದು, ಹೀಗಾಗಿ ಸ್ವಾತಂತ್ರ್ಯ ದಿನಾಚರಣೆ, ಅಂತರಾಷ್ಟ್ರೀಯ ಯೋಗ ದಿನಾಚರಣೆ, ಗಣೇಶ ಹಬ್ಬ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲು ಇತರರಿಗೆ ಅವಕಾಶ ನೀಡಬೇಕು ಎಂದು ಹಿಂದೂಪರ ಸಂಘಟನೆಗಳು ಪ್ರತಿಪಾದಿಸುತ್ತಿವೆ.
ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ನಮ್ಮದು: ಮುಸ್ಲಿಂ ಅಸೋಸಿಯೇಷನ್
ಆದರೆ ಈ 2.5 ಎಕರೆ ಜಾಗ ತಮಗೆ ಸೇರಿದ್ದು ಎಂದು ಮುಸ್ಲಿಂ ಸಂಘಟನೆ ಹೇಳಿಕೊಂಡಿದ್ದು, ಈ ಸಂಬಂಧ ಹಳೆಯ ದಾಖಲೆಗಳನ್ನು ಬಿಬಿಎಂಪಿ ವಿಶೇಷ ಆಯುಕ್ತರಿಗೆ ಕಳುಹಿಸಿದೆ. ಮುಸ್ಲಿಂ ಸಂಸ್ಥೆಯು 1965 ರ ಗೆಜೆಟ್ ನೋಟಿಫಿಕೇಶನ್ ದಾಖಲೆಗಳನ್ನು ಸಹ ಕಳುಹಿಸಿದ್ದು, ಅದು ಟಪಾಲ್ ಮೂಲಕ ಸೈಟ್ ತನ್ನ ನಿಯಂತ್ರಣದಲ್ಲಿದೆ ಎಂದು ಹೇಳಿಕೊಂಡಿದೆ. ಇದೇ ವಿಚಾರವಾಗಿ ಬಿಬಿಎಂಪಿ ಕೂಡ ಸ್ಪಷ್ಟನೆ ನೀಡಿದ್ದು, ಮುಸ್ಲಿಮ್ ಸಂಸ್ಥೆಯಿಂದ ದಾಖಲೆಗಳನ್ನು ಪಡೆದಿದ್ದು, ಪರಿಶೀಲನೆಗಾಗಿ ಕಾನೂನು ಇಲಾಖೆಗೆ ಕಳುಹಿಸುವುದಾಗಿ ತಿಳಿಸಿದೆ.
ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಪಾಲಿಕೆ ಸ್ವತ್ತು, ಯಾವುದೇ ಸಮುದಾಯ ಮೈದಾನವನ್ನು ಬಳಕೆ ಮಾಡಬಹುದು: ಬಿಬಿಎಂಪಿ ಸ್ಪಷ್ಟನೆ
ಕೆಲ ದಾಖಲೆಗಳಲ್ಲಿ ಮೈದಾನವನ್ನು ಬಿಬಿಎಂಪಿ ಆಸ್ತಿ ಎಂದು ತೋರಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ಈ ಹಿಂದೆ ಹೇಳಿಕೆ ನೀಡಿದ್ದರು. ಅಲ್ಲದೆ ಸುಪ್ರೀಂ ಕೋರ್ಟ್ ತೀರ್ಪಿನ ಕೆಲವು ದಾಖಲೆಗಳು ಕಾಣೆಯಾಗಿವೆ ಎಂದು ಅಧಿಕೃತ ಹೇಳಿಕೆಯಲ್ಲಿ ಸೇರಿಸಲಾಗಿದೆ.