ಮಂಗಳೂರು: ಸಾವರ್ಕರ್ ಫೋಟೋ ವಿಚಾರ ಕುರಿತು ವಿದ್ಯಾರ್ಥಿಗಳ ನಡುವೆ ಘರ್ಷಣೆ

ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆಯನ್ನು ಏರ್ಪಟ್ಟಿತ್ತು.

Published: 11th June 2022 01:54 PM  |   Last Updated: 11th June 2022 01:54 PM   |  A+A-


protest

ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು.

The New Indian Express

ಮಂಗಳೂರು: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆಯನ್ನು ಏರ್ಪಟ್ಟಿತ್ತು.

ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಕಾರ್ಯಕರ್ತರ ನಡುವೆ ನಿನ್ನೆ ಸಂಜೆ ಘರ್ಷಣೆ ನಡೆದಿದ್ದು, ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯನ್ನು ತಡೆಯಲು ಪೊಲೀಸರು ಮಧ್ಯಪ್ರವೇಶಿಸಬೇಕಾದ ಪರಿಸ್ಥಿತಿ ಎದುರಾಗಿತ್ತು.

ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಾಕಲಾಗಿರುವ ಸಾವರ್ಕರ್ ಅವರ ಪೋಟೋವನ್ನು ತೆಗೆಯುವಂತೆ ಎಬಿವಿಪಿ ಕಾರ್ಯಕರ್ತರು ನಮ್ಮ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ಸಿಎಫ್ಐ ಕಾರ್ಯಕರ್ತರು ಆರೋಪಿಸಿದ್ದಾರೆ.

ಕಾಲೇಜಿನ ಕ್ಲಾಸ್ ರೂಮ್ ನಲ್ಲಿ ಸಾವರ್ಕರ್ ಅವರ ಪೋಟೋ ಹಾಕಿದ್ದಕ್ಕಾಗಿ ಕಾಲೇಜು ಪ್ರಾಂಶುಪಾಲರು ಎಬಿವಿಪಿ ಕಾರ್ಯಕರ್ತರಿಂದ ಫೋಟೋ ತೆಗೆಸಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ನಮ್ಮ ಕಾರ್ಯಕರ್ತರಾದ ರಿಫಾಜ್, ಸಿದ್ಧಿಖ್ ಹಾಗೂ ಮರ್ಜುಕ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಸಿಎಫ್ಐ ಆರೋಪಿಸಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ವಿದ್ಯಾರ್ಥಿಗಳ ಎರಡೂ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿದ್ಯಾರ್ಥಿಯ ಎರಡೂ ಗುಂಪುಗಳ ನಡುವೆ ಮೊದಲು ಮಾತಿನ ಚಕಮಕಿ ನಡೆದಿದೆ. ಮಧ್ಯಾಹ್ನ 1.30ರ ವೇಳೆ ಕೈ-ಕೈ ಮಿಲಾಯಿಸಿದ್ದರೆಂದು ಕಾಲೇಜು ಪ್ರಾಂಶುಪಾಲರು ಹೇಳಿದ್ದಾರೆ. ಘರ್ಷಣೆ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಘರ್ಷಣೆ ಸಂಬಂಧ ಯಾವುದೇ ವಿದ್ಯಾರ್ಥಿಗಳು ದೂರು ನೀಡಿಲ್ಲ ಎಂದು ಹೇಳಿದ್ದಾರೆ.

ಅನುಮತಿ ಪಡೆಯದೆಯೇ ಫೋಟೋವನ್ನು ತರಗತಿಯಲ್ಲಿ ಹಾಕಲಾಗಿತ್ತು. ಹೀಗಾಗಿ ಅದನ್ನು ತೆಗೆಸಲಾಗಿತ್ತು. ನಿಯಮ ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗಳು ಕ್ಷಮೆಯನ್ನೂ ಕೇಳಿದ್ದರು ಎಂದು ಪ್ರಾಂಶುಪಾಲೆ ಅನುಸೂಯ ರೈ ಅವರು ಹೇಳಿದ್ದಾರೆ.

ವಿವಿ ಕಾಲೇಜು ಮುತ್ತಿಗೆಗೆ ಯತ್ನ
ಈ ನಡುವೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ನಿನ್ನೆ ಸಂಜೆ ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಸಂಜೆ 6 ಗಂಟೆ ಸುಮಾರಿಗೆ ಕಾಲೇಜಿನ ಹೊರಗೆ ಜಮಾಯಿಸಿ ಮುತ್ತಿಗೆ ಹಾಕಲು ಯತ್ನಿಸಿದರು, ಕಾಲೇಜು ಪ್ರಾಂಶುಪಾಲೆ ಅನಸೂಯ ರೈ ಅವರನ್ನು ಅಮಾನತು ಮಾಡಬೇಕು ಹಾಗೂ ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಕಾಲೇಜು ಗೇಟ್ ಬಳಿಯೇ ತಡೆದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನಡೆಯಿತು. ಬಳಿಕ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯಲಾಯಿತು.


Stay up to date on all the latest ರಾಜ್ಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp