
ಸಂಗ್ರಹ ಚಿತ್ರ
ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿರುವ ಬಿಬಿಎಂಪಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಶನಿವಾರ ಸೂಚನೆ ನೀಡಿದೆ.
ಕೇಂದ್ರ ಮುಸ್ಲಿಂ ಅಸೋಸಿಯೇಷನ್ ದಾಖಲೆಗಳ ಸಲ್ಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಎಸ್.ಎಂ.ಶ್ರೀನಿವಾಸ ತಿಳಿಸಿದ್ದಾರೆ.
'ಬಿಬಿಎಂಪಿಯ ಕಾನೂನು ಇಲಾಖೆ ವರದಿ ಸಲ್ಲಿಸಿದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ಹೇಳಿದರು.
ಆದೇಶ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಭೂಮಿಯನ್ನು ಆಟದ ಮೈದಾನ, ಥಾರ್ಮಿಕ ಪ್ರಾರ್ಥನೆಗಳಿಗೆ ಮಾಡಲಾಗುತ್ತಿದ್ದ ಬಳಕೆಗಳು ಎಂದಿನಂತೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.