ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 400 ಸೇರಿ ರಾಜ್ಯದಲ್ಲಿ 415 ಮಂದಿಗೆ ಪಾಸಿಟಿವ್; ಸಾವು ಶೂನ್ಯ!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 415 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,749ಕ್ಕೆ ಏರಿಕೆಯಾಗಿದೆ.
Published on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 415 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,749ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,066 ಇದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು 400 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,792,140ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ.

ರಾಜ್ಯದಲ್ಲಿ ಇಂದು 378 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,912,953ಕ್ಕೆ ಏರಿಕೆಯಾಗಿದೆ. ಇನ್ನು 3,688 ಸಕ್ರಿಯ ಪ್ರಕರಣಗಳಿವೆ.

X

Advertisement

X
Kannada Prabha
www.kannadaprabha.com