ಮಂಗಳೂರು: ಪೋಷಕರೊಂದಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು; ಶಾಲೆ ವಿರುದ್ಧ ಪ್ರಕರಣ
ತಾಯಿಯೊಂದಿಗೆ ಫೋನ್ ನಲ್ಲಿ ಮಾತನಾಡಲು ಅವಕಾಶ ನೀಡದ್ದಕ್ಕೆ ನೊಂದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ.
Published: 13th June 2022 12:47 PM | Last Updated: 13th June 2022 01:54 PM | A+A A-

ಪೂರ್ವಜ್
ಮಂಗಳೂರು: ತಾಯಿಯೊಂದಿಗೆ ಫೋನ್ ನಲ್ಲಿ ಮಾತನಾಡಲು ಅವಕಾಶ ನೀಡದ್ದಕ್ಕೆ ನೊಂದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ.
9ನೇ ತರಗತಿಯ ವಿದ್ಯಾರ್ಥಿ ಪೂರ್ವಜ್ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೂರ್ವಾಜ್ ಬೆಂಗಳೂರಿನ ಹೊಸಕೋಟೆ ಮೂಲದವನಾಗಿದ್ದು, ಶನಿವಾರ ಆತನ ತಾಯಿಯ ಹುಟ್ಟುಹಬ್ಬ ಇತ್ತು. ಈ ವೇಳೆ ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯೊಂದಿಗೆ ಫೋನ್ ಕೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಅವಕಾಶ ನೀಡಿಲ್ಲ. ಇದರಿಂದ ಪೂರ್ವಜ್ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.
ತಾಯಿಯೊಂದಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ತೀವ್ರವಾಗಿ ನೊಂದಿದ್ದ ಪೂರ್ವಜ್ ಜೂನ್ 11 ರಂದು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೇ ಹಾಸ್ಟಲ್ ನಲ್ಲಿಯೇ ಇದ್ದ ಇತರೆ ವಿದ್ಯಾರ್ಥಿಗಳು ವಿಚಾರ ತಿಳಿದು ಹಾಸ್ಟೆಲ್ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹಾಸ್ಟೆಲ್ ಸಿಬ್ಬಂದಿ ಬಾಲಕನ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಹಾಸ್ಟೆಲ್ ಗೆ ಬಂದ ಪೂರ್ವಜ್ ತಾಯಿ, ತಮ್ಮ ಮಗನಿಗೆ ಹಾಸ್ಟೆಲ್ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ದಾಖಲಾತಿ ಸಂದರ್ಭದಲ್ಲಿ ಮಕ್ಕಳ ದೈನಂದಿನ ಚಟುವಟಿಕೆಗಳನ್ನು ಗಮನಿಸುವುದಾಗಿ ಭರವಸೆ ನೀಡಿದ್ದರು. ಆದರೀಗ ತಮ್ಮ ಕರ್ತವ್ಯ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ನನ್ನ ಮಗನೊಂದಿಗೆ ಮಾತನಾಡಲು ಶಾಲೆಯ ಅಧಿಕಾರಿಗಳು ಅವಕಾಶ ನೀಡುತ್ತಿರಲಿಲ್ಲ ಎಂದು ಬಾಲಕನ ತಾಯಿ ಆರೋಪಿಸಿದ್ದಾರೆ.
ಈ ಸಂಬಂಧ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.