ಇಸ್ಕಾನ್‌ನ ರಾಜಾಧಿರಾಜ ಗೋವಿಂದ ದೇಗುಲ ಉದ್ಘಾಟಿಸಿದ ರಾಷ್ಟ್ರಪತಿ ಕೋವಿಂದ್
ಬೆಂಗಳೂರು: ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ.
ಇಸ್ಕಾನ್‌ನ ನೂತನ ರಾಜಾಧಿರಾಜ ಗೋವಿಂದ ದೇವಾಲಯ ಹಾಗೂ ಸಾಂಸ್ಕೃತಿಕ ಸಂಕೀರ್ಣ ಕಟ್ಟಡವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಉದ್ಘಾಟಿಸಿದರು. ಕನಕಪುರ ರಸ್ತೆಯ ವಸಂತಪುರದ ವಿಶಾಲ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದ್ದು, ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು ಪತ್ನಿ ಸವಿತಾ ಸಮೇತ ದೇವರ ದರ್ಶನ ಪಡೆದರು. ಈ ವೇಳೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿದ್ದರು.
ದೇವರ ದರ್ಶನ ನಂತರ, ದೇವಾಲಯ ಆವರಣದ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಿರುಮಲ ಮಾದರಿಯಲ್ಲಿ ಈ ದೇವಾಲಯ ನಿರ್ಮಿಸಲಾಗಿದ್ದು, ಮುಂದಿನ 48 ದಿನಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಆಗಸ್ಟ್ 1ರ ನಂತರ ಸಾರ್ವಜನಿಕರ ಪ್ರವೇಶಕ್ಕೆ ದೇವಾಲಯ ಮುಕ್ತವಾಗಲಿದೆ' ಎಂದು ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಮಾಹಿತಿ ನೀಡಿದ್ದಾರೆ.
'ದೇಶದ ವಿವಿಧ ಭಾಗಗಳ ಭಕ್ತರ ಭಕ್ತಿಯ ಕ್ಷೇತ್ರ ಇದಾಗಲಿದೆ. ನಿತ್ಯವೂ ಉಚಿತ ಊಟದ ವ್ಯವಸ್ಥೆ ಇರಲಿದೆ' ಎಂದೂ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ