ಮಂಗಳೂರು: ಕುದಿಯುತ್ತಿದ್ದ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು!
ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದ ಮಹಿಳೆಯೋರ್ವರು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Published: 15th June 2022 08:17 AM | Last Updated: 15th June 2022 04:33 PM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದ ಮಹಿಳೆಯೋರ್ವರು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ 37 ವರ್ಷದ ಪ್ರಮೀಳಾ ಡಿಸೋಜಾ ಎಂದು ಗುರುತಿಸಲಾಗಿದೆ. ಕಳೆದ ಮೇ 30ರಂದು ಪುತ್ತೂರು ನಗರದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಈ ಅವಘಡ ನಡೆದಿತ್ತು. ಅಗ್ನೇಸ್ ಪ್ರಮೀಳಾ ಡಿಸೋಜಾ ಅವರು ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು.
ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಶಾಲೆಯ ಅಡುಗೆ ಮನೆಯಲ್ಲಿ ಸಾಂಬಾರು ತಯಾರು ಮಾಡಿ, ಅದನ್ನು ಬಾಗಿಲ ಬಳಿಯಲ್ಲೇ ಇಟ್ಟಿದ್ದರು. ಆಗ ಪ್ರಮಿಳಾ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಿಸಿ ಸಾಂಬಾರು ಪಾತ್ರೆಗೆ ಬಿದ್ದಿದ್ದಾರೆ. ಈ ವೇಳೆ ಪ್ರಮಿಳಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆದರೆ ಘಟನೆಯ ಬಗ್ಗೆ ಪುತ್ತೂರು ಬ್ಲಾಕ್ ಶಿಕ್ಷಣಾಧಿಕಾರಿ ಲೋಕೇಶ್ ಅವರಿಗೆ ಯಾವುದೇ ಸುಳಿವಿಲ್ಲ, ಮಧ್ಯಾಹ್ನದ ಊಟದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ ಅವರು ಸೋಮವಾರವಷ್ಟೇ ಶಾಲಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.