
ಸಾಂದರ್ಭಿಕ ಚಿತ್ರ
ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಹೆದ್ದಾರಿ ಪಕ್ಕದಲ್ಲಿ ನರಸಿಂಹಮೂರ್ತಿ (50) ಕೊಲೆ ನಡೆದಿದ್ದು, ಹೆದ್ದಾರಿ ಪಕ್ಕದಲ್ಲೇ ಸ್ನೇಹಿತರ ಜೊತೆ ಚಹಾ ಕುಡಿಯುತ್ತಿದ್ದಾಗ ಈ ದಾಳಿ ನಡೆಸಲಾಗಿದೆ.
ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಂಗಳೂರು: ಕುದಿಯುತ್ತಿದ್ದ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು!
ಈ ಹಿಂದೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇತ್ತೀಚೆಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿತ್ತು. ತಾಲ್ಲೂಕಿನ ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಕೊಲೆಗಳ ಸುದ್ದಿ ಹಸಿರಾಗಿರುವಂತೆಯೇ ಮತ್ತೊಂದು ಕೊಲೆಯಾಗಿದೆ.