ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯೋಗ ದಿನಾಚರಣೆ: ಪೊಲೀಸರೊಂದಿಗೆ ಚರ್ಚಿಸಿ ನಿರ್ಧಾರ- ಬಿಬಿಎಂಪಿ
ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಯೋಗ ದಿನಾಚರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಮಾಡುವ ಕುರಿತು ವಿಎಚ್‌ಪಿ ಮತ್ತು ಇತರ ಸಂಘಟನೆಗಳು ಅರ್ಜಿಗಳ ಸಲ್ಲಿಸಿದ್ದು, ಈ ಸಂಬಂಧ ಪೊಲೀಸರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಯೋಜನಾ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಅವರು ಹೇಳಿದ್ದಾರೆ.
Published: 15th June 2022 09:04 AM | Last Updated: 15th June 2022 01:53 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಯೋಗ ದಿನಾಚರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಮಾಡುವ ಕುರಿತು ವಿಎಚ್‌ಪಿ ಮತ್ತು ಇತರ ಸಂಘಟನೆಗಳು ಅರ್ಜಿಗಳ ಸಲ್ಲಿಸಿದ್ದು, ಈ ಸಂಬಂಧ ಪೊಲೀಸರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಯೋಜನಾ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುಮಾಗಳ ಹೋಗಲಾಡಿಸಲು ಹಾಗೂ ದಾಖಲೆಗಳ ಪಡೆಯಲು ಸರ್ವೆ ಮತ್ತು ಸೆಟ್ಲ್‌ಮೆಂಟ್ ಕಚೇರಿಗೆ ಭೇಟಿ ನೀಡಿದೆ. 1976 ರ ದಾಖಲೆಗಳ ಪ್ರತಿಗಳನ್ನು ತೆಗೆದುಕೊಂಡಿದ್ದೇವೆ, ಆ ದಾಖಲೆಗಳ ಪ್ರಕಾರ ಭೂಮಿ ಬಿಬಿಎಂಪಿಗೆ ಸೇರಿದ್ದಾಗಿದೆ. ಭೂಮಿ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಇತರರು ನೀಡಿರುವ ಹಕ್ಕುಪತ್ರಗಳು ಮತ್ತು ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಬಿಬಿಎಂಪಿ ಆದೇಶ
ಯೋಗ ದಿನಾಚರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆಯನ್ನು ಆಯೋಜಿಸಲು ಅನುಮತಿ ಕೋರಿ ವಿಎಚ್‌ಪಿ ಮತ್ತು ಇತರ ಸಂಘಟನೆಗಳು ಬಿಬಿಎಂಪಿಯನ್ನು ಸಂಪರ್ಕಿಸಿದ್ದು, ಪೊಲೀಸರು ಮತ್ತು ಕೇಂದ್ರ ಕಚೇರಿಯೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನಿರ್ಧಾರ ಕೈಗೊಳ್ಳುವವರೆಗೂ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.