ಜೂನ್ 20ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ಪ್ರತಿಭಟನೆ ನಡೆಸಲು ರೈತರ ಸಜ್ಜು

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗ ಭೇಟಿ ನೀಡುತ್ತಿದ್ದು, ಈ ವೇಳೆ ರೈತರ ಬೆಳೆಗಳಿಗೆ ಬೆಲೆ ಖಾತರಿ ಶಾಸನ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘವು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗ ಭೇಟಿ ನೀಡುತ್ತಿದ್ದು, ಈ ವೇಳೆ ರೈತರ ಬೆಳೆಗಳಿಗೆ ಬೆಲೆ ಖಾತರಿ ಶಾಸನ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘವು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಕುರಿತು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಮಾತನಾಡಿ, ನಗರದ ನ್ಯಾಯಾಲಯ ಎದುರಿನ ಗಾಂಧಿ ಪುತ್ಥಳಿ ಬಳಿ ತರಕಾರಿ, ಹಣ್ಣು, ದವಸ, ಧಾನ್ಯ ಮಾರಾಟ ಮಾಡುವ ಮೂಲಕ ಪ್ರಧಾನಮಂತ್ರಿಗಳ ಗಮನ ಸೆಳೆಯಲಾಗುತ್ತದೆ. ಮೈಸೂರಿಗೆ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಮಯೋಗಿಗಳ ಕಾಯಕ ದಿನವನ್ನು ಆಚರಿಸಲಾಗುವುದು  ಎಂದು ಹೇಳಿದ್ದಾರೆ.

ಈ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೊದಲು ನರೇಂದ್ರ ಮೋದಿಯವರು ಡಾ.ಸ್ವಾಮಿನಾಥನ್ ವರದಿ ಜಾರಿ ಗೊಳಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಸುಪ್ರೀಂಕೋರ್ಟ್ ನಲ್ಲಿಯೂ ವರದಿ ಜಾರಿ ಅಸಾಧ್ಯ ಎಂದು ಅಫಿಡವಿಟ್ ಸಲ್ಲಿಸಿರುವುದು ನಮಗೆ ಬೇಸವನ್ನು ತರಿಸಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರುವ ವೇಳೆ 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ನೀಡಿದ್ದ ಭರವಸೆ ಕೂಡ ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಸಾಲ ನೀಡಲು ಸಿಬಿಲ್ ಸ್ಕೇರ್ ಉತ್ತಮವಾಗಿರಬೇಕೆಂಬ ನಿಯಮ ಬ್ಯಾಂಕ್ ಗಳು ಅನುಸರಿಸುತ್ತಿರುವ ಕಾರಣ ರೈತರಿಗೆ ಸಾಲ ದೊರೆಯುತ್ತಿಲ್ಲ. ಕ್ರಮ ಕೈಗೊಳ್ಳದಿದ್ದಲ್ಲಿ ಬೆಂಗಳೂರಿನ ಆರ್'ಬಿಐ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com