ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತ-ದಕ್ಷಿಣ ಆಫ್ರಿಕಾ ಟಿ20 ಬೆಂಗಳೂರು ಪಂದ್ಯ; ಮಧ್ಯರಾತ್ರಿವರೆಗೂ ಮೆಟ್ರೋ ರೈಲು ಕಾರ್ಯಾಚರಣೆ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂ.19ರಂದು ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ 1 ಗಂಟೆ ತನಕ ವಿಸ್ತರಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆ, ಜೂ.19ರಂದು ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ 1 ಗಂಟೆ ತನಕ ವಿಸ್ತರಿಸಿದೆ.

ಮೆಟ್ರೋ ರೈಲುಗಳು ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆಯ ಟರ್ಮಿನಲ್‍ಗಳಿಂದ ರಾತ್ರಿ 1 ಗಂಟೆಗೆ ಕೊನೆಯ ರೈಲುಗಳು ಹೊರಡಲಿದ್ದು, ಮೆಜೆಸ್ಟಿಕ್ ನಿಂದ ಟರ್ಮಿನಲ್‍ಗಳ ಕಡೆಗೆ 1.30ಕ್ಕೆ ಹೊರಡಲಿವೆ ಎಂದು ತಿಳಿಸಿದೆ.

‘50 ರೂ. ದರದ ಪೇಪರ್ ಟಿಕೇಟ್ ಪಡೆದವರು ಕಬ್ಬನ್ ಪಾರ್ಕ್ ಮೆಟ್ರೊ ರೈಲು ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 10 ಗಂಟೆ ನಂತರ ಪ್ರಯಾಣಿಸಬಹುದು. ಪಂದ್ಯಾವಳಿ ನೋಡಲು ಬರುವಾಗ ಎಂದಿನಂತೆ ಸ್ಮಾರ್ಟ್‍ಕಾರ್ಡ್ ಮತ್ತು ಟೋಕನ್‍ಗಳನ್ನು ಪಡೆದು ಪ್ರಯಾಣಿಸಬೇಕು. ವಾಪಸ್ ಹೋಗಲು ಪೇಪರ್ ಟಿಕೆಟ್‍ಗಳನ್ನು ಮಾತ್ರ ಬಳಸಲು ಅವಕಾಶ ಇದೆ’ ಎಂದು ತಿಳಿಸಿದೆ.

ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ರಿಟರ್ನ್ ಜರ್ನಿ ಟಿಕೆಟ್​ಗಳನ್ನು ನೀಡಲಿದ್ದು ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ  ಜೂನ್ 19 ಮಧ್ಯಾಹ್ನ 3 ಗಂಟೆಗೆ ಮಾರಾಟ ಮಾಡಲಾಗುತ್ತದೆ. 50 ರೂ.ಗೆ ರಿಟರ್ನ್ ಜರ್ನಿ ಟಿಕೆಟ್​ಗಳು ದೊರೆಯಲಿವೆ.  ರಿಟರ್ನ್ ಜರ್ನಿ ಪೇಪರ್ ಟಿಕೆಟ್​ಗಳು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ 19 ಜೂನ್ 2022ರ ರಾತ್ರಿ 10 ಗಂಟೆಯ ನಂತರ ಮತ್ತು 20 ಜೂನ್ ಅವಧಿಯಲ್ಲಿ ಬಳಸಬಹುದಾಗಿದೆ.

ಯಾವುದೇ ಮೆಟ್ರೋ ನಿಲ್ದಾಣದಿಂದ  ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಕ್ಕೆ ಪ್ರಯಾಣಿಸಲು ಸಾಮಾನ್ಯ ದರದಲ್ಲಿ ಸ್ಮಾರ್ಟ್ ಕಾರ್ಡ್ ಹಾಗೂ ಟೋಕನ್​ಗಳನ್ನು ಉಪಯೋಗಿಸಿ ಪ್ರಯಾಣ ಮಾಡಬಹುದು. ಆದರೆ ಕಬ್ಬನ್ ಪಾರ್ಕ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ  ಹಿಂತಿರುಗುವಾಗ ಪೇಪರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣ ಬೆಳೆಸಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com