ಡಿನೋಟಿಫಿಕೇಷನ್ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಯಡಿಯೂರಪ್ಪ, ಜಾಮೀನು ಕೋರಿ ಅರ್ಜಿ

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಹಿರಿಯ ವಕೀಲ ಸಿ ವಿ ನಾಗೇಶ್ ಅವರೊಂದಿಗೆ ಆಗಮಿಸಿದ ಕರ್ನಾಟಕ ಬಿಜೆಪಿಯ ಪ್ರಬಲ ನಾಯಕ ಯಡಿಯೂರಪ್ಪ ಅವರು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶ ಬಿ ಜಯಂತಕುಮಾರ್ ಅವರು, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೂರುದಾರರ ಪರ ವಕೀಲರಿಗೆ ಸೂಚಿಸಿದ್ದಾರೆ.

ಜಾಮೀನು ಅರ್ಜಿಯನ್ನು ಪರಿಶೀಲಿಸಿದ ನಂತರ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ದೂರುದಾರರ ಪರ ವಕೀಲ ಕೆವಿ ಧನಂಜಯ್ ಅವರು ಕೋರ್ಟ್ ಗೆ ತಿಳಿಸಿದ್ದಾರೆ.

ಜಾಮೀನು ವಿರೋಧಿಸಲು ಕಾರಣಗಳಿದ್ದರೆ, ಆಕ್ಷೇಪಣೆ ಸಲ್ಲಿಸಲಾಗುವುದು. ಅದಕ್ಕಾಗಿ ಸಮಯ ನೀಡಿ ಎಂದು ಕೆವಿ ಧನಂಜಯ್ ಅವರು ಕೋರಿದರು. ನಂತರ ಪ್ರಕರಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಾಯಿತು.

2013ರಲ್ಲಿ ವಾಸುದೇವ ರೆಡ್ಡಿ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ 79 ವರ್ಷದ ಯಡಿಯೂರಪ್ಪ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com