ಕೋವಿಡ್-19: ಬೆಂಗಳೂರಿನಲ್ಲಿ 716 ಕೇಸ್ ಸೇರಿ ರಾಜ್ಯದಲ್ಲಿ ಇಂದು 750 ಸೋಂಕು ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು ಒಟ್ಟು 716 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್‍ಗಳು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು ಒಟ್ಟು 716 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್‍ಗಳು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ ಇಂದು ಒಟ್ಟು 716 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,653ಕ್ಕೆ ಏರಿಕೆಯಾಗಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಿನಲ್ಲಿ ದಾಖಲಾದ 8 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 34 ಕೇಸ್ ಮತ್ತು 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. 

ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,070 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 425 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,825ಕ್ಕೆ ಏರಿಕೆ ಕಂಡಿದೆ.

ಈವರೆಗೆ ರಾಜ್ಯದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 39,60,208ಕ್ಕೆ ಏರಿಕೆಯಾಗಿದ್ದು, ಒಟ್ಟು 39,15,271 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 57,152 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 24,469 ಸ್ಯಾಂಪಲ್ (ಆರ್‌ಟಿಪಿಸಿಆರ್ 18,146 + 6,323 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com