ಅಗ್ನಿಪಥ್ ಯೋಜನೆ: ಪ್ರತಿಭಟಿಸುತ್ತಿರುವ ಯುವಕರ ದಾರಿ ತಪ್ಪಿಸಲಾಗಿದೆ; ಜೆ.ಪಿ.ನಡ್ಡಾ

ದೇಶದ ಹೊಸ ಯೋಜನೆಗಳು, ಕಾರ್ಯಕ್ರಮಗಳು, ಅಭಿವೃದ್ಧಿ ಮತ್ತು ಪರಿವರ್ತನೆ ಬಯಸದ ಸಮಾಜದ ಒಂದು ವರ್ಗವು ಅಗ್ನಿಪಥ್ ಯೋಜನೆ ಕುರಿತು ಯುವಕರನ್ನು ಪ್ರಚೋಜಿಸುವ ಮತ್ತು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಆರೋಪಿಸಿದ್ದಾರೆ.
ಚಿತ್ರದುರ್ಗದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಗದೆ ಹಸ್ತಾಂತರಿಸಿದರು.
ಚಿತ್ರದುರ್ಗದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಗದೆ ಹಸ್ತಾಂತರಿಸಿದರು.

ಚಿತ್ರದುರ್ಗ: ದೇಶದ ಹೊಸ ಯೋಜನೆಗಳು, ಕಾರ್ಯಕ್ರಮಗಳು, ಅಭಿವೃದ್ಧಿ ಮತ್ತು ಪರಿವರ್ತನೆ ಬಯಸದ ಸಮಾಜದ ಒಂದು ವರ್ಗವು ಅಗ್ನಿಪಥ್ ಯೋಜನೆ ಕುರಿತು ಯುವಕರನ್ನು ಪ್ರಚೋಜಿಸುವ ಮತ್ತು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಆರೋಪಿಸಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳ ರಾಜ್ಯ ಮಟ್ಟದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಯುವಕರು ತಮ್ಮ ಶಕ್ತಿಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಮತ್ತು ಕೆಲವು ಶಕ್ತಿಗಳಿಂದ ಹರಡುವ ತಪ್ಪು ಮಾಹಿತಿಗೆ ಮಣಿಯಬಾರದು. ಕೂಡಲೇ ತಮ್ಮ ಪ್ರತಿಭಟನೆಗಳನ್ನು ನಿಲ್ಲಿಸಬೇಕು ಮತ್ತು ಯೋಜನೆಯು ಅವರಿಗೆ ಉತ್ತಮ ಭವಿಷ್ಯಕ್ಕಾಗಿ ಅವಕಾಶವನ್ನು ಒದಗಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಅಗ್ನಿಪಥ್ ಕ್ರಾಂತಿಕಾರಿಯಾಗಿದೆ ಮತ್ತು ಇದು ಭಾರತೀಯ ಸಶಸ್ತ್ರ ಪಡೆಗಳನ್ನು ವಿಶ್ವದ ಅತ್ಯಂತ ಶಕ್ತಿಶಾಲಿಯಾಗಿ ಮಾಡುವುದರಿಂದ ದೇಶವನ್ನು ಪರಿವರ್ತಿಸುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ, ಇದು ಕ್ರಾಂತಿಕಾರಿ ಕಲ್ಪನೆಯಾಗಿದೆ ಎಂದು ತಿಳಿಸಿದರು.

ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ. ಈ ಉಪಕ್ರಮದ ಯಶಸ್ಸಿಗೆ ಯುವಕರ ಸಹಕಾರ ಅತ್ಯಗತ್ಯ. ಕಾರ್ಯಕ್ರಮದಲ್ಲಿ ಭಾಗವಹಿಸುವವರು ತಮ್ಮ ನೆರೆಹೊರೆ ರಾಜ್ಯಗಳಿಗೆ ಹೋಗಿ ಕಾರ್ಯಕ್ರಮದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ವಿನಂತಿಸಿದರು,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com