ಫುಡ್ ಪಾರ್ಕ್‌ಗಳ ಪ್ರಸ್ತುತ ಸ್ಥಿತಿ ಬಗ್ಗೆ ವರದಿ ನೀಡಲು ಸರ್ಕಾರ ಸೂಚನೆ

ರಾಜ್ಯದಲ್ಲಿ ಈಗಾಗಲೆ ಸ್ಥಾಪಿಸಲಾಗಿರುವ ಆಹಾರ ಪಾರ್ಕುಗಳನ್ನು (ಫುಡ್ ಪಾರ್ಕ್‌) ಸಮರ್ಪಕವಾಗಿ ಬಳಸಿಕೊಳ್ಳಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾರ್ಕ್‌ಗಳ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿ ಮಾಹಿತಿಯನ್ನು ನಬಾರ್ಡ್ ಸಂಸ್ಥೆಯ ಮೂಲಕ ಕೈಗೊಂಡು ನೀಡುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್  ಸೂಚಿಸಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಬಿಸಿ ಪಾಟೀಲ್
ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಬಿಸಿ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಈಗಾಗಲೆ ಸ್ಥಾಪಿಸಲಾಗಿರುವ ಆಹಾರ ಪಾರ್ಕುಗಳನ್ನು (ಫುಡ್ ಪಾರ್ಕ್‌) ಸಮರ್ಪಕವಾಗಿ ಬಳಸಿಕೊಳ್ಳಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾರ್ಕ್‌ಗಳ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿ ಮಾಹಿತಿಯನ್ನು ನಬಾರ್ಡ್ ಸಂಸ್ಥೆಯ ಮೂಲಕ ಕೈಗೊಂಡು ನೀಡುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್  ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ಆಹಾರ ಕರ್ನಾಟಕ ನಿಯಮಿತ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ನಡೆಯಿತು. ಸಭೆಯಲ್ಲಿ ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಸ್ಥಾಪಿಸಲಾಗುತ್ತಿರುವ ಆಹಾರ ಪಾರ್ಕಿನಲ್ಲಿ, ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ವಿವಿಧ ಬೆಳೆಗಳಿಗೆ ಮೌಲ್ಯವರ್ಧನೆ ಮತ್ತು ಸಂಸ್ಕರಣೆ ಕೈಗೊಳ್ಳಲು ಕೈಗಾರಿಕೆಗಳನ್ನು ಸ್ಥಾಪಿಸಲು ಕೈಗಾರಿಕೆ ನಿವೇಶನಗಳನ್ನು ಕೆಐಎಡಿಬಿ ಅಥವಾ ಸೂಕ್ತ ಸರ್ಕಾರಿ ಸಂಸ್ಥೆಯ ಮುಖಾಂತರ ಅಭಿವೃದ್ಧಿಪಡಿಸಿ ಉದ್ದಿಮೆದಾರರಿಗೆ ಹಂಚಿಕೆ ಮಾಡಲು ತೀರ್ಮಾನಿಸಲಾಯಿತು.

ಅಲ್ಲದೇ ಆಹಾರ ಪಾರ್ಕಿನಲ್ಲಿ ರೈತರಿಗೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳಿಗೆ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಾಮಾನ್ಯ ಮೂಲಭೂತ ಸೌಕರ್ಯಗಳಾದ ಶೀತಲಗೃಹಗಳು, ಗೋದಾಮುಗಳು, ಸಂಸ್ಕರಣೆ ಘಟಕಗಳು, ಪ್ಯಾಕಿಂಗ್ ಘಟಕಗಳು, ಪರೀಕ್ಷೆಯ ಲ್ಯಾಬೊರೇಟರಿಗಳು ಹಾಗೂ ಪ್ರಮಾಣೀಕರಣ ಕೇಂದ್ರಗಳನ್ನು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ತೀರ್ಮಾನಿಸಲಾಯಿತು.

ಆಹಾರ ಕರ್ನಾಟಕ ನಿಯಮಿತ ಸಂಸ್ಥೆಯಿಂದ ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಸ್ಥಾಪಿಸಲಾಗುತ್ತಿರುವ ಆಹಾರ ಪಾರ್ಕಿನ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಟೆಂಡರ್‌ ಅನುಮೋದನೆ ಮೂಲಕ ಚಾಲನೆ ನೀಡಲಾಯಿತು. 2022-23ರ ಬಜೆಟ್ ಘೋಷಣೆಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸುವ ಉದ್ದೇಶದಿಂದ ಮೊದಲನೇ ಹಂತದಲ್ಲಿ ಜಮೀನನ್ನು ಗುರುತಿಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ಈಗಾಗಲೆ ನೀಡಲಾಗಿದ್ದು, ಸರ್ಕಾರಿ ಜಮೀನು ಲಭ್ಯತೆ ಇಲ್ಲದ ಪಕ್ಷದಲ್ಲಿ ಬಳಕೆಯಾಗದೇ ಇರುವ ಕೃಷಿ / ತೋಟಗಾರಿಕೆ ವಿಶ್ವವಿದ್ಯಾನಿಲಯಗಳ, ಕೃಷಿ ಇಲಾಖೆಯ ಫಾರಂಗಳು ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮದ ಜಮೀನನ್ನು ಗುರುತಿಸಿ, ಈ ಉದ್ದೇಶಕ್ಕೆ ಬಳಸಿಕೊಳ್ಳಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖಾ ಆಯುಕ್ತ ಶರತ್, ನಿರ್ದೇಶಕಿ ನಂದಿನಿ ಕುಮಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com