ಹಿಜಾಬ್ ನಿಷೇಧ: ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಟಿಸಿ ಕೇಳಿದ ಐವರು ಮುಸ್ಲಿಂ ವಿದ್ಯಾರ್ಥಿನಿಯರು

ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ್ದು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ಸಹ ನಡೆಸಿದ್ದರು.

ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ ಎಸ್ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳು ಆಯಾ ಸಂಸ್ಥೆಗಳು ನಿಗದಿಪಡಿಸಿದ ಡ್ರೆಸ್ ಕೋಡ್‌ಗೆ ಬದ್ಧರಾಗಿರಬೇಕು ಮತ್ತು ಹೈಕೋರ್ಟ್ ನಿರ್ದೇಶನವನ್ನು ಅನುಸರಿಸಬೇಕು. ಬೇರೆ ಕಾಲೇಜ್ ಗುಳಿಗೆ ಸೇರಬಯಸುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಿವಿ ವಿಶೇಷ ವ್ಯವಸ್ಥೆ ಮಾಡಲಿದೆ ಎಂದು ಹೇಳಿದ್ದರು.

ಐವರು ವಿದ್ಯಾರ್ಥಿಗಳು ಟಿಸಿಗಾಗಿ ಮನವಿಯೊಂದಿಗೆ ತಮ್ಮ ಬಳಿಗೆ ಬಂದಿದ್ದರು ಮತ್ತು ತಾವು ಹಿಜಾಬ್ ಅನುಮತಿಸುವ ಇತರ ಕಾಲೇಜುಗಳಿಗೆ ಸೇರಿಕೊಳ್ಳಲು ಟಿಸಿ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕಾಲೇಜು ಪ್ರಿನ್ಸಿಪಾಲ್ ಅನಸೂಯಾ ರೈ ಅವರು ತಿಳಿಸಿದ್ದಾರೆ.

ಆದರೆ ಅವರು ನೀಡಿದ ಪತ್ರಗಳು ಅಪೂರ್ಣವಾಗಿ ಕಂಡುಬಂದಿದ್ದರಿಂದ, ಹೊಸ ಪತ್ರ ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಅವರು ಇನ್ನೂ ಹೊಸ ಪತ್ರಗಳೊಂದಿಗೆ ಬಂದಿಲ್ಲ ಎಂದು ರೈ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com