ಕರ್ನಾಟಕ ಪ್ರವಾಸಕ್ಕೆ ಪ್ರಧಾನಿ ಮೋದಿ ಆಗಮನ: ಸಾಲು ಸಾಲು ಪ್ರಶ್ನೆ ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರುಗಳಲ್ಲಿ ಕಟ್ಚೆಚ್ಚರ ವಹಿಸಲಾಗಿದೆ. ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. 
ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ)
ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ)

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರುಗಳಲ್ಲಿ ಕಟ್ಚೆಚ್ಚರ ವಹಿಸಲಾಗಿದೆ. ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. 

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ಬಿಜೆಪಿ, ಪ್ರಧಾನಿಯವರನ್ನು ಸದಾ ಟೀಕೆ ಮಾಡುವ ವಿಪಕ್ಷ ನಾಯಕರು ಸಿದ್ದರಾಮಯ್ಯನವರು ಬೆಂಗಳೂರಿಗೆ ಆಗಮಿಸಿರುವ ಮೋದಿಯವರಿಗೆ ಸಾಲುಸಾಲು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಹೇಳಿ ಮೋದಿ, #Answer Modi ಹ್ಯಾಶ್ ಟಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಸಿದ್ದರಾಮಯ್ಯನವರ ಪ್ರಶ್ನೆಗಳು:

  • ಬೆಂಗಳೂರು ಉಪನಗರ ರೈಲು ಯೋಜನೆ ನೆನೆಗುದಿಗೆ ಬೀಳಲು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣವೇ,
  • ಹಿಂದಿ ಭಾಷೆಯನ್ನು ಹೇರಲು ಹೊರಟಿರುವ ಸಂದರ್ಭದಲ್ಲಿ ಕನ್ನಡದ ಅತ್ಮಿತೆ ಬಗ್ಗೆ ನಿಮ್ಮ ನಿಲುವೇನು, ಅಮಿತ್ ಶಾ ಅವರ ಹಿಂದಿ ಹೇರಿಕೆಗೆ ನಿಮ್ಮ ಮೌನವೇಕೆ,
  • ಬೆಂಗಳೂರು ಸುತ್ತಮುತ್ತ ಭಾಗಗಳಿಗೆ ನೀರುಣಿಸುವ ಮೇಕೆದಾಟು ಯೋಜನೆ ಜಾರಿಗೆ ವಿಳಂಬವೇಕೆ,
  • ರಾಜ್ಯ ಸರ್ಕಾರವೇಕೆ ಕರಾಳ ಕೃಷಿ ಕಾಯ್ದೆಯನ್ನು ರದ್ದುಪಡಿಸಿಲ್ಲ,
  • ಬೆಂಗಳೂರು ಉಪನಗರ ರೈಲು ಯೋಜನೆಗೆ ಶೇ.20ರಷ್ಟು ವೆಚ್ಚವನ್ನು ಕೇಂದ್ರ ಸರ್ಕಾರ ನೀಡಿದೆಯೇ, 
  • ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದ ಶೇ.40ರಷ್ಟು ಕಮಿಷನ್ ಆರೋಪ ಬಗ್ಗೆ ತನಿಖೆ ಯಾವಾಗ,
  • ಜಿಎಸ್ ಟಿ ಪರಿಹಾರ ಮೂರು ವರ್ಷ ಮುಂದುವರಿಸಬೇಕೆಂದು ಕೇಳಿದ್ದಕ್ಕೆ ನಿಮ್ಮ ಉತ್ತರವೇನು, ಜಿಎಸ್ ಟಿ ಪರಿಹಾರ ರಾಜ್ಯದ ಜನರ ಮೇಲೆ ಹೊರೆಯಲ್ಲವೇ,
  • ಜಿಎಸ್ಟಿ ಜಾರಿ, ಕೊರೋನಾದಿಂದ, ನೋಟು ಅನಾಣ್ಯೀಕರಣದಿಂದ ಉದ್ಯೋಗ ಕಳೆದುಕೊಂಡಿದ್ದಕ್ಕೆ ಯಾರು ಹೊಣೆ, ಕರ್ನಾಟಕದಿಂದ ಇಷ್ಟೊಂದು ತೆರಿಗೆ ಸಂಗ್ರಹವಾಗುತ್ತಿದ್ದರೂ ಕೇಂದ್ರದಿಂದ ರಾಜ್ಯಕ್ಕೆ ಏಕೆ ಕಡಿಮೆ ಕೊಡುಗೆ ಬರುತ್ತಿದೆ
  • ಹೀಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿ ಅದಕ್ಕೆಲ್ಲಾ ಉತ್ತರಿಸುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com