ಮೈಸೂರಿನಲ್ಲಿ ಪ್ರಧಾನಿ ಮೋದಿ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ

ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಮೈಸೂರು: ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ (Chamundi HIlls) ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರಿನಿಂದ ಸಂಜೆ ಮೈಸೂರಿಗೆ ಆಗಮಿಸಿದ ಮೋದಿ ಅವರು ಮೈಸೂರಿವ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಲ್ಲಿ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಸಿದರು. ಬಳಿಕ ಅವರು ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಅಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ 8.15ರ ಸುಮಾರಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದರು.

ಸುತ್ತೂರು ಶಾಖಾ ಮಠದಿಂದ ನಿರ್ಗಮಿಸಿದ ಪ್ರಧಾನಿ ಮೋದಿ ರಸ್ತೆ ಮಾರ್ಗವಾಗಿ ಚಾಮುಂಡಿಬೆಟ್ಟಕ್ಕೆ ತೆರಳಿದರು. ಬಳಿಕ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡೇಶ್ವರಿ ಸನ್ನಿದಾನಕ್ಕೆ ಆಗಮಿಸಿದ ಮೋದಿ ಅವರಿಗೆ ದೇವಾಲಯದ ಪ್ರಧಾನ ಅರ್ಚಕರು ಪ್ರಧಾನಿಗೆ ಸ್ವಾಗತ ಕೋರಿದರು. ಈ ವೇಳೆ ಮೋದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೊಹ್ಲೋಟ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿಎಂ ಬಸವರಾಜ್​​ ಬೊಮ್ಮಾಯಿ ಸೇರಿ ಹಲವರು ಸಾಥ್​​ ನೀಡಿದರು.

ಬಳಿಕ ನಾಡಿನ ಅಧಿದೇವತೆ ಚಾಮುಂಡಿ ದರ್ಶನ ಪಡೆದ ಪ್ರಧಾನಿ ಮೋದಿ, ತಾಯಿ ಚಾಮುಂಡೇಶ್ವರಿಗೆ ಸಂಕಲ್ಪ ಪೂಜೆ ನೆರವೇರಿಸಿದ್ದಾರೆ. ಮುಖ್ಯ ಅರ್ಚಕ ಡಾ.ಶಶಿಶೇಖರ ದೀಕ್ಷಿತ್​ ಅವರು ಮೋದಿ ಸಂಕಲ್ಪ ಪೂಜೆ ಮಾಡಿದರು. ಇದೇ ಮೊದಲ ಬಾರಿಗೆ ಚಾಮುಂಡಿ ದರ್ಶನ ಪಡೆದ ಮೋದಿ ಚಾಮುಂಡಿ ಸನ್ನಿಧಿಯಲ್ಲಿ ಆಶಯದಂತೆ ಸಂಕಲ್ಪ ಪೂಜೆ ನೆರವೇರಿಸಿದ್ದಾರೆ.

ರ್ಯಾಡಿಸನ್​ ಬ್ಲೂ ಹೋಟೆಲ್​ನಲ್ಲಿ ಮೋದಿ ವಾಸ್ತವ್ಯ
ನಾಡಿನ ಅಧಿದೇವತೆ ಚಾಮುಂಡಿ ದರ್ಶನ ಪಡೆದು ಚಾಮುಂಡಿಬೆಟ್ಟದಿಂದ ಮೈಸೂರು ನಗರದತ್ತ ಪ್ರಯಾಣ ಬೆಳೆಸಿದ್ದಾರೆ. ಮೈಸೂರಿನ ರ್ಯಾಡಿಸನ್​ ಬ್ಲೂ ಹೋಟೆಲ್​ನಲ್ಲಿ 141 ನೇ ಕೊಠಡಿಯ ಪ್ರೆಸಿಡೆಂಟ್ ಸ್ಯೂಟ್ ನಲ್ಲಿ ವಾಸ್ಥವ್ಯ ಹೊಡಲಿದ್ದಾರೆ. ಬಳಿಕ ನಾಳೆ ಬೆಳಗ್ಗೆ ಮೈಸೂರು ಅರಮನೆ ಮೈದಾನದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com