ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ಸಿಸಿಬಿ ತನಿಖೆಗೆ ಆಗ್ರಹ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ ನಡೆಸಿರುವ ಕುರಿತು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ ನಡೆಸಿರುವ ಕುರಿತು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಚಿವೆಯ ಆಪ್ತ ಎಂದು ಹೇಳಿಕೆಕೊಂಡು ತಮಿಳುನಾಡಿನ ಚೆನ್ನೈ ಹಾಗೂ ಊಟಿಯಲ್ಲಿ ಸಾರ್ವಜನಿಕರಿಂದ ಹಣ ಪಡೆದು ಕಳೆದು ಮೂರು ತಿಂಗಳಿಂದ ಪ್ರಕಾಶ್ ಎಂದು ಹೇಳಿಕೊಂಡಿರುವ ಆರೋಪಿ ಕೃಷಿಕರಿಗೆ ಮತ್ತು ಉದ್ಯಮಿಗಳಿಗೆ ವಂಚನೆ ಮಾಡಿರುವುದಾಗಿ ತಿಳಿದು ಬಂದಿದೆ.

ತಾನು ಸಚಿವೆಯವರ ಆಪ್ತ ಎಂದು ಕೆಲಸಗಳನ್ನು ಮಾಡಿಸಿಕೊಡುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಲಾಗಿದ್ದು, ಸಚಿವೆ ಶೋಭಾ ಅವರಿಗೆ ಕರೆ ಮಾಡಿ ವ್ಯಕ್ತಿಯೊಬ್ಬರು ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಸಚಿವೆ ಶೋಭಾ ಕರದ್ಲಾಂಜೆ ಆಪ್ತ ವರುಣ್ ಆದಿತ್ಯ ಅವರು ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಧಾರವಾಡದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ತಕ್ಷಣ ಅದನ್ನು ಸಿಸಿಬಿಗೆ ವರ್ಗಾಯಿಸಿ ತನಿಖೆ ನಡೆಯಬೇಕಿದೆ ಎಂದಿದ್ದಾರೆ.

ವಂಚನೆ ಪ್ರಕರಣದ ಆರೋಪಿಯನ್ನು ಪ್ರಕಾಶ್ ಎಂದು ಗುರುತಿಸಲಾಗಿದೆ. ಕಳೆದು ಮೂರು ತಿಂಗಳಿಂದ ಈತ, ತಾನು ಸಚಿವೆಯವರ ಆಪ್ತ ಎಂದು ಅಲ್ಲಿನ ಕೃಷಿಕರಿಗೆ, ಬ್ಯುಸಿನೆಸ್ ಮ್ಯಾನ್ ಗೆ ಆ ಕೆಲಸ.. ಈ ಕೆಲಸ ಮಾಡಿಸಿಕೊಡುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದಾನೆ. ಸಂಸದೆಗೆ ಕರೆ ಮಾಡಿ ಯಾರೋ ತಿಳಿಸಿದಾಗ ಈ ಪ್ರಕರಣ ಬಯಲಿಗೆ ಬಂದಿದೆ.

ತಮಿಳುನಾಡಿನ ಚೆನ್ನೈ ಮತ್ತು ಊಟಿ ಕಡೆಯ ನಂಬರ್ ಬಳಸಿಕೊಂಡು ಕೃಷಿಕರಿಗೆ ಮತ್ತು ವ್ಯಾಪಾರಸ್ಥರಿಗೆ ಕರೆ ಮಾಡಿ ನಾನು ಕೇಂದ್ರ ಸಚಿವರ ಆಪ್ತ ಸಹಾಯಕ. ನಿಮಗೆ ಕೇಂದ್ರ ಸರಕಾರದ ಯೋಜನೆಯಲ್ಲಿ ಅನುಕೂಲ ಮಾಡಿಸುತ್ತೇನೆ ಎಂದು ಹೇಳಿಕೊಂಡು ಹಣ ಪಡೆದು ಮೋಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿತ್ತು. ಹೀಗಾಗಿ ತಕ್ಷಣವೆ ಬೆಂಗಳೂರಿನ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ನನ್ನ ಕಚೇರಿ ದುರ್ಬಳಕೆ ಆಗಿಲ್ಲ. ಊಟಿ ಮತ್ತು ಚೆನ್ನೈನಲ್ಲಿ ದುರ್ಬಳಕೆ ಮಾಡುತ್ತಿದ್ದವರ ಬಂಧನ ಆಗಬೇಕಿದೆ. ಅವರ ಫೋನ್ ನಂಬರ್ ಪೊಲೀಸರಿಗೆ ಕೊಟ್ಟಿದ್ದೇನೆ. ಯಾರ ಕೈವಾಡವಿದೆ ಎಂಬುದರ ಕುರಿತು ತನಿಖೆ ಮಾಡಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com