ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋವಿಡ್ ನಿಂದ ಅನಾಥರಾದ 14 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ

ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ರಾಜ್ಯದ 14 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ರಾಜ್ಯದ 14 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪಿಎಂ ಕೇರ್ಸ್‌ನ ಫಲಾನುಭವಿಗಳಾಗಿರುವ 14 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ನಿರ್ದೇಶಕಿ ಲತಾ ಕುಮಾರಿ ಕೆ ಎಸ್ ಅವರು ಮಾಹಿತಿ ನೀಡಿದ್ದಾರೆ.

14 ಮಂದಿಯ ಪೈಕಿ  ಮೂವರು ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿದ್ದರೆ, ಎಂಟು ಮಂದಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. ಇನ್ನುಳಿದ ಮೂವರು ಮಾತ್ರ ಶೇ.60ಕ್ಕಿಂತ ಕಡಿಮೆ ಅಂಕ ಪಡೆದಿದ್ದಾರೆಂದು ತಿಳಿಸಿದ್ದಾರೆ.

14 ಮಂದಿಯಲ್ಲಿ ಒಂಬತ್ತು ಮಂದಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು, ಮೂವರು ವಾಣಿಜ್ಯ ಮತ್ತು ಇಬ್ಬರು ಕಲಾ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆಂದು ಹೇಳಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಯೊಬ್ಬ ಶೇ.94.33 ಅಂಕ ಗಳಿಸಿದ್ದಾನೆ. ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ವಿಜ್ಞಾನ ವಿಭಾಗದಲ್ಲಿ ಶೇ.90.83 ಹಾಗೂ ಶೇ.87.83 ಅಂಕ ಪಡೆದಿದ್ದು, ಕಲಾ ವಿಭಾಗದಲ್ಲಿ ಒಬ್ಬರು ಶೇ.71 ಅಂಕ ಪಡೆದಿದ್ದಾರೆ. ಉಡುಪಿಯಲ್ಲಿ ವಿದ್ಯಾರ್ಥಿಯೊಬ್ಬ ವಾಣಿಜ್ಯ ವಿಭಾಗದಲ್ಲಿ ಶೇ.81 ಅಂಕ ಪಡೆದಿದ್ದಾನೆ. ಮಂಡ್ಯ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಯೊಬ್ಬ ಶೇ.80.6 ಅಂಕ ಗಳಿಸಿದ್ದರೆ, ಹಾಸನದಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ.77.60 ಅಂಕ ಪಡೆದಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಒಬ್ಬ ವಿದ್ಯಾರ್ಥಿ ವಾಣಿಜ್ಯ ವಿಭಾಗದಲ್ಲಿ ಶೇ.77 ಅಂಕ ಗಳಿಸಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ವಿಜ್ಞಾನ ವಿಭಾಗದಲ್ಲಿ ಶೇ.75.67 ಅಂಕ ಗಳಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಶೇ.69.83 ಮತ್ತು ಶೇ.53.33 ಹಾಗೂ ವಾಣಿಜ್ಯ ವಿಭಾಗದಲ್ಲಿ ಮತ್ತೊಬ್ಬರು ಶೇ.63.66 ಅಂಕ ಗಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬ ವಿಜ್ಞಾನ ವಿಷಯದಲ್ಲಿ ಶೇ.56 ಅಂಕ ಗಳಿಸಿದ್ದಾನೆಂದು ಮಾಹಿತಿ ನೀಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com