ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ಸಿಗುತ್ತದೆ: ಮೈಸೂರಿನಲ್ಲಿ ಪ್ರಧಾನಿ ಮೋದಿ
ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ ಯೋಗ ದಿನಾಚರಣೆ ಶುಭಾಶಯಗಳು. ಯೋಗದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆಬೀಡು ಮೈಸೂರಿಗೆ ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದರು.
Published: 21st June 2022 08:29 AM | Last Updated: 21st June 2022 01:29 PM | A+A A-

ಪ್ರಧಾನಿ ಮೋದಿ
ಮೈಸೂರು: ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ ಯೋಗ ದಿನಾಚರಣೆ ಶುಭಾಶಯಗಳು. ಯೋಗದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆಬೀಡು ಮೈಸೂರಿಗೆ ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದರು.
8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದ ಜನತೆಗೆ ಯೋಗ ದಿನಾಚರಣೆ ಶುಭಾಶಯಗಳು. ಕರ್ನಾಟಕ ಸಾಂಸ್ಕೃತಿಕ ರಾಜಧಾನಿ ಮೈಸೂರು, ಯೋಗ ಭೂಮಿ.. ಇಲ್ಲಿ ಕಂಡ ಯೋಗದ ಬೆಳಕು ಇವತ್ತು ವಿಶ್ವದ ಎಲ್ಲೆಡೆ ಪಸರಿಸಿದೆ. ಇಂದು ಯೋಗ ವಿಶ್ವಕ್ಕೆ ಆರೋಗ್ಯದ ಮಹತ್ವವನ್ನು ತಿಳಿಸುತ್ತಿದೆ. ಮೈಸೂರು ಭಾರತದ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ಮೊದಲು ಯೋಗವನ್ನು ಕೇವಲ ಮನೆಗಳಲ್ಲಿ ಮಾತ್ರ ಮಾಡಲಾಗುತ್ತಿತ್ತು. ಯೋಗ ವ್ಯಕ್ತಿಗೆ ಮಾತ್ರವಲ್ಲ, ವಿಶ್ವ ಮಾನವೀಯತೆ ಬೇಕಿದೆ. ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲೂ ಕೂಡ ಯೋಗ ದಿನದ ಉತ್ಸಾಹ ಕಡಿಮೆ ಆಗಿರಲಿಲ್ಲ. ಇಂದು ಯೋಗ ದಿನಾಚರಣೆ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ. ನಮ್ಮೆಲರ ಜೀವನಕ್ಕೆ ಯೋಗ ವಿಶ್ವಾಸವನ್ನು ನೀಡುತ್ತಿದೆ ಎಂದು ಹೇಳಿದರು.
#WATCH LIVE | Prime Minister Narendra Modi leads the #InternationalDayOfYoga celebrations from Karnataka's Mysuru.
— ANI (@ANI) June 21, 2022
https://t.co/dpviUOw5up
ಮೈಸೂರಿನಂತಹ ಭಾರತದ ಆಧ್ಯಾತ್ಮಿಕ ಕೇಂದ್ರಗಳಿಂದ ಶತಮಾನಗಳಿಂದ ಪೋಷಿಸಿಕೊಂಡು ಬಂದಿರುವ ಯೋಗ ಶಕ್ತಿ ಇಂದು ವಿಶ್ವ ಆರೋಗ್ಯಕ್ಕೆ ದಿಕ್ಸೂಚಿಯಾಗಿದೆ. ಇಂದು ಯೋಗವು ಜಾಗತಿಕ ಸಹಕಾರಕ್ಕೆ ಪರಸ್ಪರ ಆಧಾರವಾಗುತ್ತಿದೆ. ಇಂದು ಯೋಗವು ಮನುಕುಲಕ್ಕೆ ಆರೋಗ್ಯಕರ ಜೀವನದ ನಂಬಿಕೆಯನ್ನು ನೀಡುತ್ತಿದೆ. ಯೋಗ ಈಗ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಯೋಗವು ಯಾವುದೇ ವ್ಯಕ್ತಿಗೆ ಮಾತ್ರವಲ್ಲ, ಇಡೀ ಮಾನವಕುಲಕ್ಕೆ. ಆದ್ದರಿಂದ, ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನದ ಥೀಮ್ – ಮಾನವೀಯತೆಗಾಗಿ ಯೋಗ ಆಗಿದೆ. ಯೋಗವು ನಮಗೆ ಶಾಂತಿಯನ್ನು ತರುತ್ತದೆ. ಯೋಗದಿಂದ ಶಾಂತಿಯು ಕೇವಲ ವ್ಯಕ್ತಿಗಳಿಗೆ ಮಾತ್ರವಲ್ಲ. ಯೋಗದಿಂದ ನಮ್ಮ ಸಮಾಜಕ್ಕೆ ಶಾಂತಿ ಸಿಗುತ್ತದೆ. ಯೋಗವು ನಮ್ಮ ರಾಷ್ಟ್ರಗಳಿಗೆ ಮತ್ತು ಜಗತ್ತಿಗೆ ಶಾಂತಿಯನ್ನು ತರುತ್ತದೆ. ಮತ್ತು ಯೋಗವು ನಮ್ಮ ವಿಶ್ವಕ್ಕೆ ಶಾಂತಿಯನ್ನು ತರುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಮೈಸೂರು ವಿಶ್ವ ಯೋಗ ದಿನಾಚರಣೆ: ಓಂಕಾರದೊಂದಿಗೆ ಯೋಗಸನ ಆರಂಭಿಸಿದ ಪ್ರಧಾನಿ ಮೋದಿ
ಇಂದು ಜೀವನ ಶೈಲಿ ಭಾರೀ ಬದಲಾವಣೆ ಆಗಿದೆ. ಯೋಗ ನಮ್ಮ ಬದುಕಿಗೂ ಪ್ರೇರಣೆಯಾಗಿದೆ. ದೇಶದ 75 ಐತಿಹಾಸಿಕ ಕೇಂದ್ರ ಸ್ಥಳಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಯೋಗ ಜೀವನ ಒಂದು ಭಾಗವಲ್ಲ, ಇಂದು ಯೋಗ ಜೀವನ ಶೈಲಿಯೇ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಾರ್ಡಿಯನ್ ರಿಂಗ್ ಆಫ್ ಯೋಗ ಮಾಡಲಾಗುತ್ತಿದೆ. ಜಗತ್ತಿನ ಹಲವು ದೇಶಗಳಲ್ಲಿ ಸುರ್ಯೋದಯದೊಂದಿಗೆ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಯೋಗ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕಾಗಿ ಆಯುಷ್ಮಾನ್ ಇಲಾಖೆಯಲ್ಲಿ ಸ್ಟಾರ್ಟ್ಅಪ್ ಕೂಡ ತರಲಾಗಿದೆ. ವಿಶ್ವದಲ್ಲಿ ರೋಗ ಮುಕ್ತಿಗೆ ಯೋಗಾಸನವೇ ಆಧಾರವಾಗಿದೆ. ಪ್ರತಿನಿತ್ಯ ಪ್ರಾಣಾಯಾಮ, ಯೋಗ ಮಾಡೋದನ್ನು ರೂಢಿಸಿಕೊಳ್ಳಿ ಎಂದರು.