ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಚಕ್ರತೀರ್ಥ ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು: ದೇವೇಗೌಡ
ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥನಾಗಿ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.
Published: 22nd June 2022 08:15 AM | Last Updated: 22nd June 2022 12:37 PM | A+A A-

ದೇವೇಗೌಡ
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥನಾಗಿ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.
ಪುಠ್ಯಪುಸ್ತಕ ಪರಿಷ್ಕರಣೆ ಕುರಿತು ಸರ್ಕಾರಕ್ಕೆ ನಿನ್ನೆಯಷ್ಟೇ ಹೆಚ್.ಡಿ.ದೇವೇಗೌಡ ಅವರು ಪತ್ರ ಬರೆದಿದ್ದು, ಹಿಂಪಡೆದು, ಚಿಂತಕ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಎಲ್ಲ 27 ಸಮಿತಿಗಳು ಪರಿಷ್ಕರಿಸಿದ್ದ ಹಳೆಯ ಪಠ್ಯವನ್ನೇ ಮುಂದುವರಿಸುವಂತೆ ಒತ್ತಾಯಿಸಿದ್ದರು.
"ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾಗಿ ಕುವೆಂಪು ಅವರನ್ನು ಅವಮಾನಿಸಿದ ವ್ಯಕ್ತಿಯನ್ನು (ಚಕ್ರತೀರ್ಥ) ನೇಮಕ ಮಾಡುವ ಮೂಲಕ ಸರ್ಕಾರವು ಮೊದಲ ತಪ್ಪು ಮಾಡಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ಅಧ್ಯಾಯದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದುಹಾಕಲಾಗಿದೆ, ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಮಠದ ಕೊಡುಗೆಗಳನ್ನು ತೆಗೆದುಹಾಕಲಾಗಿದೆ ಮತ್ತು ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಭಾರತೀಯ ಸಂವಿಧಾನದ ಶಿಲ್ಪಿ ಎಂಬ ಉಲ್ಲೇಖವನ್ನು ಕೈಬಿಡಲಾಗಿದೆ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ದೇವೇಗೌಡ ಅವರ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಇಂದು ಸಭೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆ: ದೇವೇಗೌಡರ ಸಲಹೆ ಗಂಭೀರವಾಗಿ ಪರಿಗಣನೆ – ಸಿಎಂ ಬೊಮ್ಮಾಯಿ
ಬುಧವಾರ ಶಿಕ್ಷಣ ಇಲಾಖೆ ಮುಖ್ಯಸ್ಥರು ಮತ್ತು ಶಿಕ್ಷಣ ಸಚಿವರೊಂದಿಗೆ ಸಭೆ ನಡೆಸಲಿದ್ದು, ಮಾಜಿ ಪ್ರಧಾನಿ ಪತ್ರದ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು. ಅವರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ಸಂಭವನೀಯ ಕ್ರಮಗಳನ್ನು ಏನು ತೆಗೆದುಕೊಳ್ಳಬಹುದು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ಹೇಳಿದರು.
ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಶನಿವಾರ ಚಕ್ರತೀರ್ಥ ಹಾಗೂ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಪಠ್ಯಪುಸ್ತಕ ಪರಿಷ್ಕರಣೆಯನ್ನು "ಶಿಕ್ಷಣದ ಕೇಸರಿಕರಣ" ಎಂದು ಕರೆದರು. ಗೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.