ರಾಜ್ಯದಲ್ಲಿ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 820 ಸೇರಿ 858 ಮಂದಿಗೆ ಪಾಸಿಟಿವ್; ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 858 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,63,633ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 858 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,63,633ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಒಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40,072 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 820 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,98,680ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾಗೆ ಒಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 682 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,18,452ಕ್ಕೆ ಏರಿಕೆಯಾಗಿದೆ. ಇನ್ನು 5,067 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com