ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ನಿವೇಶನ ಹಸ್ತಾಂತರ

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ಹಸ್ತಾಂತರಿಸಲಾಗಿದೆ.
ಸಾಲು ಮರದ ತಿಮ್ಮಕ್ಕನಿಗೆ ನಿವೇಶನ ಹಸ್ತಾಂತರ
ಸಾಲು ಮರದ ತಿಮ್ಮಕ್ಕನಿಗೆ ನಿವೇಶನ ಹಸ್ತಾಂತರ

ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ಹಸ್ತಾಂತರಿಸಲಾಗಿದೆ.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಸಾಲುಮರದ ತಿಮ್ಮಕ್ಕ ಅವರಿಗೆ ಹಸ್ತಾಂತರ ಮಾಡಿದರು.

ಸಾಲು ಮರದ ತಿಮ್ಮಕ್ಕ ತನ್ನ ಸಾಕು ಮಗ ಉಮೇಶ್ ಜೊತೆಯಲ್ಲಿ ಜೀವನವನ್ನು ನಡೆಸುತ್ತಿದ್ದಾರೆ. ಸಾಕು ಮಗ ಉಮೇಶ್ ಜೊತೆಯಲ್ಲಿ ಜೂನ್ 21ರಂದು ಸಿಎಂ ಮನೆಗೆ ತೆರಳಿದ್ದರು. ಈ ವೇಳೆ ಸಿಎಂ ಜೊತೆ ಉಭಯ ಕುಶಲೋಪರಿಯನ್ನು ವಿಚಾರಿಸಿದರು. ತಿಮ್ಮಕ್ಕನ ವಾಸಕ್ಕೆ ಬೆಂಗಳೂರಿನಲ್ಲಿ ಸೂಕ್ತ ನಿವೇಶನ ಇಲ್ಲದಿರುವುದನ್ನು ಮನಗಂಡ ಸಿಎಂ ತಕ್ಷಣವೇ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್‌ಗೆ ಕರೆ ಮಾಡಿದ್ದಾರೆ.

ವಿಶ್ವನಾಥ್ ಜೊತೆ ಮಾತನಾಡಿ ಸಾಲು ಮರದ ತಿಮ್ಮಕ್ಕನಿಗೆ ಬೆಂಗಳೂರಿನಲ್ಲಿ ನಿವೇಶನವನ್ನು ನೀಡುವಂತೆ ತಿಳಿಸಿದ್ದಾರೆ. ಇದರಿಂದಾಗಿ ಶತಾಯುಷಿಯಾಗಿರುವ ಸಾಲುಮರದ ತಿಮ್ಮಕ್ಕನಿಗೆ ಇಳಿವಯಸ್ಸಿನಲ್ಲಿ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ನಿವೇಶನವನ್ನು ಮಂಜೂರು ಮಾಡಿದೆ.

ನಿವೇಶನಕ್ಕಾಗಿ ಸಮಾಜ ಕಲ್ಯಾಣ ಇಲಾಖೆ 1.12 ಕೋಟಿ ರೂ ಹಣ ಪಾವತಿಸಿದೆ ಎಂದು ಬಿಡಿಎ ಆಯುಕ್ತ ರಾಜೇಶ್ ಗೌಡ ತಿಳಿಸಿದ್ದಾರೆ. ತಿಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com