ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಕರ್ನಾಟಕ ಹೈಕೋರ್ಟ್

ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. 

ಕಟ್ಟಡದ ನೆಲಮಹಡಿ ಸಾರ್ವಜನಿಕ ವೀಕ್ಷಣೆಯ ಸ್ಥಳವಲ್ಲ. ಹಾಗಾಗಿ ಅಲ್ಲಿಂದ ಬಯ್ಯುವುದು ಅಥವಾ ನಿಂದನೆ ಮಾಡಿದರೆ ಅದು ಪರಿಶಿಷ್ಠ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 

ಮಂಗಳೂರಿನ ರಿತೇಶ್ ಪಯಾಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. 2020ರಲ್ಲಿ ಈ ಪ್ರಕರಣ ನಡೆದಿತ್ತು. ನೆಲಮಹಡಿ ಸಾರ್ವಜನಿಕ ವೀಕ್ಷಣೆಯ ಸ್ಥಳವಲ್ಲ. ಹೀಗಾಗಿ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಸೆ. 3(1)(ಆರ್)(ಎಸ್)(ವಿಎ) ಅನ್ವಯವಾಗುವುದಿಲ್ಲ ಎಂದು ಹೇಳಿರುವ ಕೋರ್ಟ್ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿ ರಿತೇಶ್ ಪಯಾಸ್ ವಿರುದ್ಧ ಹೂಡಿದ್ದ ಅಟ್ರಾಸಿಟಿ ಕಾಯ್ದೆಯನ್ನು ರದ್ದುಪಡಿಸಿದೆ. 

ರಿತೇಶ್ ಪಯಾಸ್ ಮತ್ತು ಜಯಕುಮಾರ್ ನಾಯರ್ ನಡುವೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯವಿತ್ತು. ನಾಯರ್ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಎಂಬಾತ ತಮ್ಮನ್ನು ಜಾತಿನಿಂದನೆ ಮಾಡಿದ್ದಾರೆ ಎಂದು ದೂರು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com