ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳಿಂದ ದಾಳಿ, ತಪಾಸಣೆ
ರಾಜಕೀಯ ಮುಖಂಡರು, ಅಧಿಕಾರಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದು ಸಾಮಾನ್ಯ. ಇಂದು ಗುರುವಾರ ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.
Published: 23rd June 2022 09:18 AM | Last Updated: 23rd June 2022 09:18 AM | A+A A-

ರೇವಾ ಯೂನಿವರ್ಸಿಟಿ, ಶ್ರೀ ಕೃಷ್ಣದೇವರಾಯ ಯೂನಿವರ್ಸಿಟಿ(ಸಂಗ್ರಹ ಚಿತ್ರ)
ಬೆಂಗಳೂರು: ರಾಜಕೀಯ ಮುಖಂಡರು, ಅಧಿಕಾರಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದು ಸಾಮಾನ್ಯ. ಇಂದು ಗುರುವಾರ ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.
ಆದಾಯ ತೆರಿಗೆ ವಿವರ ಸಲ್ಲಿಕೆಯಲ್ಲಿ ಲೋಪದೋಷ, ತೆರಿಗೆ ವಂಚನೆ, ಅಕ್ರಮದ ಮಾಹಿತಿ ಆಧಾರದ ಮೇಲೆ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ಶ್ರೀಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ಯೂನಿವರ್ಸಿಟಿ ಸೇರಿದಂತೆ ನಗರದ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ದಾಳಿ ನಡೆದಿದೆ.
ಕರ್ನಾಟಕ ಮತ್ತು ಗೋವಾ ಮೂಲದ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆದಿದ್ದು, ನೆರೆಯ ಆಂಧ್ರ ಪ್ರದೇಶದಲ್ಲಿ ಕೂಡ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ.