ಮಂಗಳೂರು: ಒಕಿನಾವಾ ಶೋರೂಂನಲ್ಲಿ ಅಗ್ನಿ ಅವಘಡ, 10ಕ್ಕೂ ಹೆಚ್ಚು ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಗಾಹುತಿ

ಮಂಗಳೂರಿನ ನಾಗೂರಿನಲ್ಲಿರುವ ಎಲೆಕ್ಟ್ರಾನಿಕ್ ದ್ವಿಚಕ್ರ ವಾಹನ ತಯಾರಕ ಒಕಿನಾವಾ ಆಟೋಟೆಕ್‌ನ ಇ-ಬೈಕ್ ಶೋರೂಂನಲ್ಲಿ ಶುಕ್ರವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೊತ್ತಿ ಉರಿದ ಒಕಿನಾವಾ ಶೋರೂಂ
ಹೊತ್ತಿ ಉರಿದ ಒಕಿನಾವಾ ಶೋರೂಂ

ಮಂಗಳೂರು: ಮಂಗಳೂರಿನ ನಾಗೂರಿನಲ್ಲಿರುವ ಎಲೆಕ್ಟ್ರಾನಿಕ್ ದ್ವಿಚಕ್ರ ವಾಹನ ತಯಾರಕ ಒಕಿನಾವಾ ಆಟೋಟೆಕ್‌ನ ಇ-ಬೈಕ್ ಶೋರೂಂನಲ್ಲಿ ಶುಕ್ರವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದರೂ, ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. 10ಕ್ಕೂ ಹೆಚ್ಚು ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿವೆ.

ಸಿಬ್ಬಂದಿಗಳ ಪ್ರಕಾರ, ಗುರುವಾರ ರಾತ್ರಿ ವಾಹನದ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಇಟ್ಟುಕೊಂಡಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರೂ ಶೋರೂಂ ಸಂಪೂರ್ಣ ಸುಟ್ಟು ಕರಕಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com