ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 236 ಸೇರಿ ರಾಜ್ಯದಲ್ಲಿ 253 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 253 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,702ಕ್ಕೆ ಏರಿಕೆಯಾಗಿದೆ.
Published: 25th June 2022 10:28 PM | Last Updated: 25th June 2022 10:28 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 253 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,702ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40072 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 15,940 ಹೊಸ ಕೇಸ್ ಪತ್ತೆ, 20 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು 236 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,99,692ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 611 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,19,766ಕ್ಕೆ ಏರಿಕೆಯಾಗಿದೆ. ಇನ್ನು 4822 ಸಕ್ರಿಯ ಪ್ರಕರಣಗಳಿವೆ.
Today's Media Bulletin 25/06/2022
— K'taka Health Dept (@DHFWKA) June 25, 2022
Please click on the link below to view bulletin.https://t.co/qH21CgKkYy @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/7bFJbtKqn6