
ಸಂಗ್ರಹ ಚಿತ್ರ
ಮಡಿಕೇರಿ: ದಕ್ಷಿಣ ಕನ್ನಡದ ಸುಳ್ಯ ತಾಲೂಕು, ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದ್ದು, ಸ್ಥಳೀಯರು ಆತಂಕಗೊಡಿದ್ದಾರೆ.
ಸುಳ್ಯದ ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.
ಇದನ್ನೂ ಓದಿ: ಹಾಸನ, ಕೊಡಗು, ಮಂಡ್ಯ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕಂಪಿಸಿದ ಭೂಮಿ: ನಸುಕಿನ ಸವಿನಿದ್ದೆಯಲ್ಲಿದ್ದವರನ್ನು ಬಡಿದೆಪ್ಪಿಸಿದ ಭೂಕಂಪ
ಇನ್ನು ಕೊಡಗಿನಲ್ಲಿ ಸಂಪಾಜೆ, ಕರಿಕೆ, ಚೆಂಬು, ಪೆರಾಜೆ ಭಾಗದಲ್ಲಿ ಬೆಳಿಗ್ಗೆ 9.10 ರಲ್ಲಿ ಸುಮಾರು 3 ಸೆಕೆಂಡ್ ಗಳ ಕಂಪನದ ಅನುಭವ ಆಗಿದೆ ಎಂದು ತಿಳಿದುಬಂದಿದೆ.