ನಾಡಪ್ರಭು ಕೆಂಪೇಗೌಡ 513ನೇ ಜಯಂತಿ: ಎಸ್ ಎಂ ಕೃಷ್ಣ, ನಾರಾಯಣಮೂರ್ತಿ, ಪ್ರಕಾಶ ಪಡುಕೋಣೆ ಗೆ ಪ್ರಶಸ್ತಿ ಪ್ರದಾನ

ನಾಡಪ್ರಭು ಕೆಂಪೇಗೌಡ 513ನೇ ಜಯಂತಿಯನ್ನು ರಾಜ್ಯ ಸರ್ಕಾರ ವತಿಯಿಂದ ಇಂದು ಸೋಮವಾರ ವಿಧಾನಸೌಧದಲ್ಲಿ ಆಚರಿಸಲಾಯಿತು. 
ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ
ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ಬೆಂಗಳೂರು: ನಾಡಪ್ರಭು ಕೆಂಪೇಗೌಡ (Kempe Gowda jayanti)ರ 513ನೇ ಜಯಂತಿಯನ್ನು ರಾಜ್ಯ ಸರ್ಕಾರ ವತಿಯಿಂದ ಇಂದು ಸೋಮವಾರ ವಿಧಾನಸೌಧದಲ್ಲಿ ಆಚರಿಸಲಾಯಿತು. 

ಇಂದು ವಿಧಾನಸೌಧದಲ್ಲಿ ನಡೆದ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ಹಲವು ಗಣ್ಯರಿಗೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದರು. 

ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾರಾಯಣಮೂರ್ತಿ ಪರವಾಗಿ ಸುಧಾ ನಾರಾಯಣಮೂರ್ತಿ, ಪಡುಕೋಣೆ ಪರವಾಗಿ ವಿಪುಲಕುಮಾರ ಪ್ರಶಸ್ತಿ ಸ್ವೀಕರಿಸಿದರು. 

ಸಮಾರಂಭದಲ್ಲಿ ಡಾ. ನಿರ್ಮಲಾನಂದ ಮಹಾಸ್ವಾಮಿಗಳು, ನಂಜಾವಧೂತ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಸಚಿವರಾದ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಆರ್ ಅಶೋಕ, ಕೆ. ಗೋಪಾಲಯ್ಯ, ಸುನಿಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಮತ್ತು ಇತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com