ಡ್ರಿಂಕ್‌ ಆ್ಯಂಡ್ ಡ್ರೈವ್, ರೂಲ್ಸ್ ಬ್ರೇಕ್ ಮಾಡುವ ವಾಹನಗಳಿಗೆ ಮಾತ್ರ ದಂಡ ಹಾಕಿ: ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ

ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ. 

ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಗರದಲ್ಲಿ ವಾಹನಗಳ ತಡೆದು ಪರಿಶೀಲನೆ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ರಸ್ತೆಯಲ್ಲಿ ಬರುವ ವಾಹನಗಳನ್ನು ಸುಖಾಸುಮ್ಮನೆ ತಡೆದು ವಾಹನಗಳ ಪರಿಶೀಲನೆ ನಡೆಸುವಂತಿಲ್ಲ. ಡ್ರಿಂಕ್ ಆಂಡ್ ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ನಡೆಸಿ. ಕಣ್ಣಿಗೆ ಸ್ಪಷ್ಟವಾಗಿ ಕಾಣುವಂತೆ ರೂಲ್ಸ್ ಬ್ರೇಕ್ ಮಾಡುವಂತಹ ವಾಹನಗಳನ್ನು ತಡೆದು ಪರಶೀಲಿಸಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಈ ಟ್ವೀಟ್ ನ್ನು ನಗರದ ಪೊಲೀಸ್ ಆಯುಕ್ತ ಹಾಗೂ ಟ್ರಾಫಿಕ್ ಜಂಟಿ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ. 

ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ದಂಡ ಕಲೆಕ್ಷನ್ ಎಫೆಕ್ಟ್‌ನಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಎಲ್ಲೆಂದರಲ್ಲಿ ರೂಲ್ಸ್ ಉಲ್ಲಂಘನೆ ಮಾಡದೇ ಇದ್ರೂ ಟ್ರಾಫಿಕ್ ಪೊಲೀಸರು ವಾಹನ ಅಡ್ಡ ಹಾಕ್ತಾರೆ ಎಂದು ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದಿತ್ತು. 

ನಿಯಮಗಳು ತಮಗೆ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿರುವ ಬಹುತೇಕ ಸಂಚಾರ ಪೊಲೀಸರು, ದಾಖಲೆಗಳ ಪರಿಶೀಲನೆ ನೆಪದಲ್ಲಿ ಸಿಕ್ಕ ಸಿಕ್ಕ ವಾಹನಗಳನ್ನು ಅಡ್ಡಗಟ್ಟುತ್ತಿರುವುದು ಜನರ ಸಿಟ್ಟಿಗೆ ಕಾರಣವಾಗಿತ್ತು. ಸಾರ್ವಜನಿಕರು ಟ್ವೀಟ್ ಮೂಲಕ ಪೊಲೀಸ್ ಮಹಾನಿರ್ದೇಶಕರಿಗೆ ಈ ಬಗ್ಗೆ ದೂರು ದಾಖಲಿಸಿದ್ದರು.

ಹೀಗಾಗಿ ಟ್ವೀಟ್ ಮೂಲಕ ಎಲ್ಲೆಂದರಲ್ಲಿ ದಾಖಲೆಯ ಪರಿಶೀಲನೆ ನೆಪದಲ್ಲಿ ಗಾಡಿಯನ್ನು ನಿಲ್ಲಿಸುವಂತಿಲ್ಲ. ಈ ಬಗ್ಗೆ ಬೆಂಗಳೂರು ನಗರ ಕಮೀಷನರ್‌ಗೆ ಹಾಗೂ ಟ್ರಾಫಿಕ್ ಪೊಲೀಸರಿಗೆ ತಕ್ಷಣ ಜಾರಿಗೊಳಿಸುವಂತೆ ಸೂಚನೆ ಕೊಡುತ್ತೇನೆ ಎಂದು ಬೆಂಗಳೂರಿಗರಿಗೆ ಪ್ರವೀಣ್ ಸೂದ್ ಭರವಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com