ಬೆಂಗಳೂರು: ವಾಹನ ಸವಾರರಿಗೆ ಗುಡ್ ನ್ಯೂಸ್; ಅನಗತ್ಯ ವಾಹನ ತಪಾಸಣೆಗೆ ಡಿಜಿಪಿ ಬ್ರೇಕ್!

ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನು ಮಾತ್ರ ತಪಾಸಣೆ ಮಾಡಿ, ಸುಖಾಸುಮ್ಮನೆ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ ವಾಹನ ತಪಾಸಣೆ ಮಾಡದಂತೆ ಅಧಿಕಾರಿಗಳಿಗೆ  ಸೂಚಿಸಿದ್ದಾರೆ.

ರಸ್ತೆಯಲ್ಲಿ ಪೊಲೀಸರು ದಿಢೀರನೇ ವಾಹನ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಪೊಲೀಸರ ತಪಾಸಣೆಗೆ ಬೆದರಿ ವಾಹನ ಸವಾರರು ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಪಘಾವಾಗುತ್ತವೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಇದೀಗ ಪ್ರವೀಣ್ ಸೂದ್ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರವೀಣ್ ಸೂದ್, ನಾನು ಮತ್ತೊಮ್ಮೆ ಪುನರುಚ್ಚರಿಸುತ್ತೇನೆ. ಕಣ್ಣಿಗೆ ಸ್ಪಷ್ಟವಾಗಿ ಗೋಚರಿಸುವಂತೆ ಸಂಚಾರ ನಿಯಮ ಉಲ್ಲಂಘನೆ ಮಾಡದ ಹೊರತು ಕೇವಲ ದಾಖಲೆಗಳನ್ನು ಪರಿಶೀಲಿಸುವುದಕ್ಕಾಗಿ ಯಾವುದೇ ವಾಹನ ನಿಲ್ಲಿಸಬಾರದು,  ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನು ಮಾತ್ರ ತಪಾಸಣೆ ಮಾಡುವಂತೆ ಹೇಳಿದ್ದಾರೆ. ಇದನ್ನು ಅನುಷ್ಟಾನಗೊಳಿಸಲು ಬೆಂಗಳೂರು ಪೊಲೀಸ್ ಕಮಿಷನರ್ ಮತ್ತು ಸಂಚಾರಿ ವಿಭಾಗದ ಜಂಟಿ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com