ಇಂದಿನಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು

ರಾಜ್ಯಾದ್ಯಂತ ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭವಾಗಿದೆ. ಜೂನ್ 27 ರಿಂದ ಜುಲೈ 4ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭವಾಗಿದೆ. ಜೂನ್ 27 ರಿಂದ ಜುಲೈ 4ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ.

2021-22ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿರುವ ವಿದ್ಯಾರ್ಥಿಗಳಿಗೆ, ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಮೇ 19 ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು.

ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ, 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ವಹಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತರ ಸ್ಯಾನಿಟೈಸ್ ಮಾಡುವುದು. ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು. ದೈಹಿಕ ಅಂತರ ಕಾಪಾಡುವುದು. ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಸೂಚನಾ ಫಲಕದ ಮುಂದೆ ವಿದ್ಯಾರ್ಥಿಗಳು ಗುಂಪು ಗೂಡದಂತೆ ತಡೆಯುವುದು. ವಿದ್ಯಾರ್ಥಿ ತನ್ನದೇ ಆದಂತ ನೀರಿನ ಬಾಟಲಿ ತರುವುದು. ಕೆಮ್ಮು, ನೆಗಡಿ, ಜ್ವರ ಮೊದಲಾದವುಗಳಿಂದ ಬಳಲುತ್ತಿರೋ, ಲಕ್ಷಣಗಳಿರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಕಾಯ್ದಿರಿಸುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com