ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ; 1 ಲಕ್ಷ ನೋಂದಣಿ: ಸಚಿವ ಮುರುಗೇಶ್ ನಿರಾಣಿ
ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, 1 ಲಕ್ಷ ವಾಹನಗಳ ನೋಂದಣಿಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
Published: 28th June 2022 01:34 PM | Last Updated: 28th June 2022 01:48 PM | A+A A-

ಮುರುಗೇಶ್ ನಿರಾಣಿ
ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, 1 ಲಕ್ಷ ವಾಹನಗಳ ನೋಂದಣಿಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
EV’s are the future and Karnataka is leading this segment.
— Dr. Murugesh R Nirani (@NiraniMurugesh) June 28, 2022
Over 1 lakh EV’s have been registered in Karnataka. Coupled with the robust RnD environment and the EV policy of the state, we are certain that Karnataka will drive the EV revolution in India. pic.twitter.com/04vuxaT5WQ
ಈ ಕುರಿತಂತೆ ಸಚಿವ ಮುರುಗೇಶ್ ನಿರಾಣಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇದ್ದು, ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವ ನಿರಾಣಿ ಕೂ ಮಾಡಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.
ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ’ ಎಂದು ಹೇಳಿದ್ದಾರೆ.