ಜುಲೈ 14-15 ರಂದು ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ ಕೃಷಿ ಸಚಿವರ ಸಭೆ: ಸಚಿವ ಬಿಸಿ ಪಾಟೀಲ್

ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಜುಲೈ 14 ಮತ್ತು 15 ರಂದು ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ ಕೃಷಿ ಸಚಿವರ ಸಭೆಯನ್ನು ಆಯೋಜಿಸುತ್ತಿದೆ.
ಸಚಿವ ಬಿಸಿ ಪಾಟೀಲ್ (ಸಂಗ್ರಹ ಚಿತ್ರ)
ಸಚಿವ ಬಿಸಿ ಪಾಟೀಲ್ (ಸಂಗ್ರಹ ಚಿತ್ರ)

ಬೆಂಗಳೂರು: ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಜುಲೈ 14 ಮತ್ತು 15 ರಂದು ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ ಕೃಷಿ ಸಚಿವರ ಸಭೆಯನ್ನು ಆಯೋಜಿಸುತ್ತಿದೆ. 

ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಶೋಭಾ ಖಾರಂದ್ಲಾಜೆ ಅವರೊಂದಿಗೆ 30 ರಾಜ್ಯದ ಕೃಷಿ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. 

ರೈತರ ಆದಾಯವನ್ನು ದ್ವಿಗುಣಗೊಳಿಸುವ ಮತ್ತು ರಾಜ್ಯಗಳ ನಡುವೆ ಉತ್ತಮ ಕಾರ್ಯವಿಧಾನಗಳ ವಿನಿಮಯ ಮಾಡಿಕೊಳ್ಳುವ ಉಪಕ್ರಮಗಳ ಮೇಲೆ ಈ ಸಭೆ ಕೇಂದ್ರೀಕರಿಸಲಿದೆ ಎಂದು ತಿಳಿದುಬಂದಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಕಾರ್ಯಕ್ರದಲ್ಲಿ ಕೃಷಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸರಣಿ ಚರ್ಚೆಗಳು ನಡೆಯಲಿವೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಕರ್ನಾಟಕ ಅಥವಾ ರಾಜಸ್ಥಾನದಲ್ಲಿ ಈ ಸಭೆ ನಡೆಸುವ ಕುರಿತು ಚರ್ಚೆಗಳು ನಡೆದಿದ್ದವು. ರಾಜ್ಯವು ರೈತರ ಮಕ್ಕಳಿಗಾಗಿ ವಿದ್ಯಾನಿಧಿ ಯೋಜನೆ ಸೇರಿದಂತೆ ಅನೇಕ ವಿನೂತನ ಉಪಕ್ರಮಗಳನ್ನು ಹೊರತಂದಿದ್ದರಿಂದ ಸಚಿವಾಲಯವು ಕರ್ನಾಟಕವನ್ನು ಆಯ್ಕೆ ಮಾಡಿದೆ ಎಂದು ಹೇಳಿದ್ದಾರೆ. 

ಈಗಾಗಲೇ ರಾಜ್ಯ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವತ್ತ ಗಮನಹರಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆದ್ಯತೆ ನೀಡಿವೆ. ರೈತರ ಆದಾಯವನ್ನು ಹೆಚ್ಚಿಸುವತ್ತ ಮಾತ್ರ ಕೇಂದ್ರೀಕರಿಸುವ ನಿರ್ದೇಶನಾಲಯವನ್ನು ಕರ್ನಾಟಕ ಸ್ಥಾಪಿಸಿದೆ. ರೈತರ ಆದಾಯ ದ್ವಿಗುಣಗೊಳಿಸಲು ಇತರ ರಾಜ್ಯಗಳಲ್ಲಿಯೂ ಉತ್ತಮ ಕಾರ್ಯವಿಧಾನಗಳಿದ್ದು, ಅವುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಯಲ್ಲಿ ಕೃಷಿ ಕ್ಷೇತ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಯೋಜನವನ್ನು ನೀಡುವ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ. 

ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಕೃಷಿಗೆ ಬಜೆಟ್ ಐದರಿಂದ ಆರು ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರವೂ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸಿದೆ. ಸಭೆಯಲ್ಲಿ ಕೇಂದ್ರ ಸಚಿವರು ಕೃಷಿ ಮತ್ತು ರೈತರಿಗೆ ಸಂಬಂಧಿಸಿದ ವಿವಿಧ ಕೇಂದ್ರ ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಅವರು ಬೆಂಗಳೂರಿನಲ್ಲಿ ಎಲ್ಲಾ ಜಲಸಂಪನ್ಮೂಲ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದರು.

ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದ ಬಜೆಟ್ ಐದರಿಂದ ಆರು ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ. 

ರಾಜ್ಯ ಸರ್ಕಾರವೂ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸಿದೆ. ಸಭೆಯಲ್ಲಿ ಕೇಂದ್ರ ಸಚಿವರು ಕೃಷಿ ಮತ್ತು ರೈತರಿಗೆ ಸಂಬಂಧಿಸಿದ ವಿವಿಧ ಕೇಂದ್ರ ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಅವರು ಬೆಂಗಳೂರಿನಲ್ಲಿ ಎಲ್ಲಾ ಜಲಸಂಪನ್ಮೂಲ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com