ರಾಜ್ಯದಲ್ಲಿ 2 ದಿನವೂ 1000 ಗಡಿ ದಾಟಿದ ಕೊರೋನಾ: ಇಂದು ಬೆಂಗಳೂರಿನಲ್ಲಿ 984 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,69,411ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,69,411ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40073ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 984 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,04,091ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 857 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,23,398ಕ್ಕೆ ಏರಿಕೆಯಾಗಿದೆ. ಇನ್ನು 5,896 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com