ಕರ್ನಾಟಕದ ಮೇಕೆದಾಟು ಅಣೆಕಟ್ಟು ಪ್ರಸ್ತಾವನೆಗೆ ಅನುಮೋದನೆ ನೀಡಬೇಡಿ: ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರಕ್ಕೆ ತಾಂತ್ರಿಕ ಮತ್ತು ಪರಿಸರ ಅನುಮತಿ ನೀಡದಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ತಮಿಳುನಾಡು ಸಿಎಂ ಸ್ಟಾಲಿನ್
ತಮಿಳುನಾಡು ಸಿಎಂ ಸ್ಟಾಲಿನ್

ವೆಲ್ಲೂರು/ತಿರುಪತ್ತೂರು: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರಕ್ಕೆ ತಾಂತ್ರಿಕ ಮತ್ತು ಪರಿಸರ ಅನುಮತಿ ನೀಡದಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ವೆಲ್ಲೂರಿನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಕಳೆದ ಎರಡು ವಾರಗಳಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಅಣೆಕಟ್ಟು ನಿರ್ಮಿಸುವ ಅವರ ಪ್ರಯತ್ನವನ್ನು ವಿಫಲಗೊಳಿಸಲು ನಾವು ಪ್ರತಿ ಪ್ರಯತ್ನವನ್ನೂ ಮಾಡುತ್ತೇವೆ ಎಂದು ಹೇಳಿದರು. 

ಏತನ್ಮಧ್ಯೆ, ತಿರುಪತ್ತೂರಿನಲ್ಲಿ ಬುಧವಾರ ಕಲ್ಯಾಣ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸ್ಟಾಲಿನ್, ಸಾಮಾಜಿಕ ನ್ಯಾಯ ಮತ್ತು ರಾಜ್ಯ-ಸ್ವಾಯತ್ತತೆ ವಿಚಾರದಲ್ಲಿ ತಮಿಳುನಾಡು ದೇಶದ ಉಳಿದ ಭಾಗಗಳಿಗೆ ಮಾದರಿಯಾಗಿದೆ.

ಇಂದು ವಿವಿಧ ರಾಜ್ಯಗಳಲ್ಲಿ ಸಾಮಾಜಿಕ ನ್ಯಾಯದ ಧ್ವನಿ ಗಟ್ಟಿಯಾಗುತ್ತಿದೆ. ತಮಿಳುನಾಡು, 1920 ರಲ್ಲಿ ಸಾಮಾಜಿಕ ನ್ಯಾಯ ಪ್ರಧಾನಗಳನ್ನು ಜಾರಿಗೆ ತಂದಿತು. ಡಿಎಂಕೆಯ ಕಾರಣದಿಂದಾಗಿ ರಾಜ್ಯವು ಇತರ ಹಿಂದುಳಿದ ಜಾತಿಗಳಿಗೆ (ಒಬಿಸಿ) ಶೇ.27 ಮೀಸಲಾತಿಯನ್ನು ಖಾತ್ರಿಪಡಿಸಲಾಯಿತು.

ಇದೀಗ ಕಾನೂನು ಹೋರಾಟದ ಮೂಲಕ ಒಬಿಸಿ ಮೀಸಲಾತಿಯನ್ನು ಎತ್ತಿ ಹಿಡಿಯುತ್ತಿದ್ದೇವೆ. 1974 ರಲ್ಲಿ ರಾಜ್ಯ ವಿಧಾನಸಭೆಯಲ್ಲಿ ಕಲೈಂಜರ್ ಅವರು ಒಕ್ಕೂಟದ ನಿರ್ಣಯವನ್ನು ಅಂಗೀಕರಿಸಿದರು ಎಂದು ತಿಳಿಸಿದರು.

ಇದೇ ವೇಳೆ ಇತರ ರಾಜ್ಯ ಸರ್ಕಾರಗಳು ನಮ್ಮ ಯೋಜನೆಗಳನ್ನು ಜಾರಿಗೆ ತರುತ್ತಿವೆ ಎಂದು ಪ್ರತಿಪಾದಿಸಿದ ಸ್ಟಾಲಿನ್, ಕರುಣಾನಿಧಿ ಅವರ ಪ್ರಯತ್ನದ ಫಲವಾಗಿ ಆಧುನಿಕ ತಮಿಳುನಾಡು ನಿರ್ಮಾಣವಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com