ವಿದೇಶದಲ್ಲಿ ವೈದ್ಯ ಪದವಿ ಪಡೆದು ಬಂದ ಶೇ. 90 ರಷ್ಟು ವಿದ್ಯಾರ್ಥಿಗಳು ಇಲ್ಲಿನ ಅರ್ಹತಾ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ: ಪ್ರಹ್ಲಾದ ಜೋಶಿ

ವಿದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಬರುವ ಶೇ 90ರಷ್ಟು ವಿದ್ಯಾರ್ಥಿಗಳು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯವಿರುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

Published: 02nd March 2022 11:30 AM  |   Last Updated: 02nd March 2022 01:50 PM   |  A+A-


Pralhad Joshi

ಪ್ರಹ್ಲಾದ ಜೋಶಿ

Online Desk

ಬೆಳಗಾವಿ: ವಿದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಬರುವ ಶೇ 90ರಷ್ಟು ವಿದ್ಯಾರ್ಥಿಗಳು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯವಿರುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ’ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 16,000 ಭಾರತೀಯ ಪ್ರಜೆಗಳು ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿರುವ ಹಿನ್ನೆಲೆಯಲ್ಲಿ ಜೋಶಿ ಈ ಹೇಳಿಕೆ ನೀಡಿದ್ದಾರೆ.  ಭಾರತದ 16 ಸಾವಿರ ಮಂದಿಯಲ್ಲಿ ಹಲವರು ವೈದ್ಯಕೀಯ ಅಧ್ಯಯನಕ್ಕಾಗಿ ಉಕ್ರೇನ್‌ಗೆ ತೆರಳಿದ್ದ ವಿದ್ಯಾರ್ಥಿಗಳಾಗಿದ್ದಾರೆ.

ಇದನ್ನೂ ಓದಿ: ಉಕ್ರೇನ್ ನಲ್ಲಿ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ; ರಾಜಕೀಯ ಮಾಡಿ ಆತ್ಮಸ್ಥೈರ್ಯ ಕುಗ್ಗಿಸುವುದು ಬೇಡ: ಎಚ್ ಡಿ ದೇವೇಗೌಡ

ವಿದೇಶದಲ್ಲಿನ ಹಾಗೂ ಭಾರತದಲ್ಲಿನ ವೈದ್ಯಕೀಯ ಶಿಕ್ಷಣಕ್ಕಾಗಿ ತಗಲುವ ವೆಚ್ಚ ಎಷ್ಟೇ ಇರಲಿ ಆ ಕುರಿತು ಈಗ ವಿವರವಾದ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ ಎಂದಿದ್ದಾರೆ. ವೈದ್ಯಕೀಯ ಪದವಿಗೆ ಭಾರತದಲ್ಲಿ ಹೆಚ್ಚಿನ ಹಣ ಖರ್ಚಾಗುತ್ತದೆ, ಉಕ್ರೇನ್‌ನಲ್ಲಿ ಕಡಿಮೆ ಖರ್ಚಾಗುತ್ತದೆ ಹೀಗಾಗಿ ಹೋಗುತ್ತಾರೆ ಎಂಬ ಮಾತಿದೆಯಲ್ಲಾ’ ಎಂಬ ಪ್ರಶ್ನೆಗೆ, ಉತ್ತರಿಸಿದ ಅವರು ‘ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ಈಗ ಬಯಸುವುದಿಲ್ಲ. ಅಲ್ಲಿ ಕಲಿತು ಬಂದವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹಾರೈಸಬಲ್ಲೆ’ ಎಂದು ಹೇಳಿದ್ದಾರೆ.

ಅನೇಕ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಎಂಬಿಬಿಎಸ್ ಮಾಡಲು ಹೋಗಿದ್ದಾರೆ. ಏಕೆಂದರೇ ಉಕ್ರೇನ್ ಮಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಚೆನ್ನಾಗಿದೆ ಎಂದು ಹೇಳಲಾಗಿದೆ.  ಭಾರತದ ಖಾಸಗಿ ಕಾಲೇಜುಗಳು ಮತ್ತು ಇತರ ದೇಶಗಳಲ್ಲಿನ ವೈದ್ಯಕೀಯ ಕೋರ್ಸ್‌ಗಳಿಗೆ ತಗಲುವ ವೆಚ್ಚ ಹೋಲಿಸಿದರೆ  ಉಕ್ರೇನ್ ನಲ್ಲಿ ತೀರ ಅಗ್ಗವಾಗಿದೆ.  ಇದೇ ಕಾರಣಗಳಿಗಾಗಿ ಉಕ್ರೇನ್‌ನಲ್ಲಿ ಅಧ್ಯಯನ ಮಾಡಲು ಆಯ್ಕೆ ಮಾಡುತ್ತಾರೆ ಎಂದು ವರದಿಯಾಗಿದೆ.


Stay up to date on all the latest ರಾಜ್ಯ news
Poll
Parliament

2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷ ಯಾವುದು ಎಂದು ನೀವು ಭಾವಿಸುತ್ತೀರಿ?


Result
ಕಾಂಗ್ರೆಸ್
ಎಎಪಿ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Mahesh

    Sir, Request you to not make such comments. They will be qualified in NEET.Might not get good ranking to get free seats
    9 months ago reply
flipboard facebook twitter whatsapp