ಬೆಂಗಳೂರು ಕಡೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ರಕ್ಷಣಾ ಸಿಬ್ಬಂದಿ ವಿರುದ್ಧ ಕೇಸ್
ದೆಹಲಿಯಿಂದ ಬೆಂಗಳೂರು ಕಡೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 34 ವರ್ಷದ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Published: 04th March 2022 03:49 PM | Last Updated: 04th March 2022 04:29 PM | A+A A-

ಏರ್ ಇಂಡಿಯಾ ವಿಮಾನದ ಸಾಂದರ್ಭಿಕ ಚಿತ್ರ
ಬೆಂಗಳೂರು: ದೆಹಲಿಯಿಂದ ಬೆಂಗಳೂರು ಕಡೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 34 ವರ್ಷದ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಫೆಬ್ರವರಿ 28 ರಂದು ಬೆಳಗ್ಗೆ 6-10ಕ್ಕೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ನಿರ್ಗಮಿಸಿದ ನಂತರ ಈ ಘಟನೆ ನಡೆದಿದೆ. ವಿಮಾನ ಸುಮಾರು 8-45ಕ್ಕೆ ಬೆಂಗಳೂರು ತಲುಪಿದ ನಂತರ ಎಫ್ ಐಆರ್ ದಾಖಲಿಸಲಾಗಿದೆ.
ದೆಹಲಿಯಲ್ಲಿ ಏರ್ ಇಂಡಿಯಾ 803 ವಿಮಾನ ಟೇಕ್ ಆದ ಕೂಡಲೇ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಬಿಹಾರದ ಸಿವಾನ್ ಜಿಲ್ಲೆಯ ರಕ್ಷಣಾ ಸಿಬ್ಬಂದಿ ಅಭಿಷೇಕ್ ಕುಮಾರ್, ಅನುಚಿತವಾಗಿ ವರ್ತಿಸಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಆರಂಭದಲ್ಲಿ ಮಹಿಳೆ ಆತನ ವರ್ತನೆ ಬಗ್ಗೆ ಸಂದೇಹಪಟ್ಟರೂ ಆತ ಮುಂದುವರೆಸಿದ್ದರಿಂದ ವಿಮಾನದಲ್ಲಿದ್ದ ಸಿಬ್ಬಂದಿ ಕರೆದು ಸಮಸ್ಯೆ ಹೇಳಿಕೊಂಡಿದ್ದಾರೆ. ಸೀಟು ತೊರೆಯುವಂತೆ ಆದೇಶಿಸಿದ್ದರೂ ಆತ ಸೀಟು ತೊರೆದಿಲ್ಲ. ನಂತರ ಮಹಿಳೆ ಬೇರೊಂದು ಸೀಟಿಗೆ ಸ್ಥಳಾಂತರವಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ವಿಮಾನ ಬೆಂಗಳೂರಿಗೆ ತಲುಪುತ್ತಿದ್ದಂತೆ ಮಹಿಳಾ ಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ. ಸಿಆರ್ ಪಿಸಿ (ಎ) ಅಥವಾ (ಬಿ) ಸೆಕ್ಷನ್ ನಡಿ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿತ್ತು. ನಂತರ ಜಾಮೀನಿನ ಆಧಾರದ ಮೇಲೆ ಬಿಡುಗಡೆ ಮಾಡಲಾಗಿದೆ.