social_icon

ಬಿಬಿಎಂಪಿ ಚುನಾವಣೆ ಹೊಸ್ತಿಲಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿಗೆ ಮೂಲಸೌಕರ್ಯ, ಹಸಿರು ನಗರಿಗೊಳಿಸಲು ಮತ್ತು ನಾಗರಿಕರ ಅನುಕೂಲಕ್ಕಾಗಿ 8,409 ಕೋಟಿ ರೂ.ಅನುದಾನವನ್ನು ಮೀಸಲಿಟ್ಟಿದ್ದಾರೆ.

Published: 05th March 2022 01:19 PM  |   Last Updated: 05th March 2022 01:38 PM   |  A+A-


File photo

ಸಂಗ್ರಹ ಚಿತ್ರ

The New Indian Express

ಬೆಂಗಳೂರು: ಬೆಂಗಳೂರಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿಗೆ ಮೂಲಸೌಕರ್ಯ, ಹಸಿರು ನಗರಿಗೊಳಿಸಲು ಮತ್ತು ನಾಗರಿಕರ ಅನುಕೂಲಕ್ಕಾಗಿ 8,409 ಕೋಟಿ ರೂ.ಅನುದಾನವನ್ನು ಮೀಸಲಿಟ್ಟಿದ್ದಾರೆ.

2021–22ನೇ ಸಾಲಿನ ಬಜೆಟ್‌ಗೆ ಹೋಲಿಸಿದರೆ ಈ ವರ್ಷ ಒಟ್ಟು ರೂ.614 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಘೋಷಣೆ ಮಾಡಲಾಗಿದೆ. ಕಳೆದ ಬಜೆಟ್‌ನಲ್ಲಿ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಒಟ್ಟು ರೂ. 7,795 ಕೋಟಿ ಅನುದಾನ ಬಿಡುಗಡೆ ಮಾಡಿತ್ತು.

ಈ ಬಾರಿಯ ಬಜೆಟ್‌ನಲ್ಲಿ ಕೆಲವು ಘೋಷಣೆಗಳು ಹಿಂದಿನ ಪ್ರಸ್ತಾವನೆಗಳ ವಿಸ್ತರಣೆಗಳಾಗಿರುವುದು ಕಂಡು ಬಂದಿದೆ. ಆದರೆ ಈ ಪ್ರಸ್ತಾವನೆಗಳಿಗೆ ಸರ್ಕಾರ ಗಡುವನ್ನು ನಿಗದಿಪಡಿಸಿದೆ ಎಂದು ತಜ್ಞರು ಮತ್ತು ಅಧಿಕಾರಿಗಳು ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ಬಜೆಟ್‌ಗೆ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದಿಂದ ಖಂಡನೆ

ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗಳು ನಗರದ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಹಳೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 1500 ಕೋಟಿ ರೂ ಅನುದಾನವನ್ನು ಮೀಸಲಿರಿಸಿದ್ದಾರೆ. ನಗರದಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಲು ಮುಖ್ಯಮಂತ್ರಿಗಳು ಅಮೃತ ನಗರೋತ್ಥಾನ ಯೋಜನೆಯನ್ನು ರೂಪಿಸಿದ್ದಾರೆ. ಘನತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳು ಮತ್ತು ಕೊಳೆಗೇರಿ ಅಭಿವೃದ್ಧಿಯ ಜೊತೆಗೆ ರಸ್ತೆಗಳು, ಗ್ರೇಡ್ ಸಪರೇಟರ್‌ಗಳು, ಕೆರೆಗಳು ಮತ್ತು ಉದ್ಯಾನವನಗಳ ಅಭಿವೃದ್ಧಿಗೆ ಗಮನಹರಿಸಲು ರೂ.6000 ಕೋಟಿ ವೆಚ್ಚದ ಯೋಜನೆ ರೂಪಿಸಿದ್ದಾರೆಂದು ತಿಳಿಸಿದ್ದಾರೆ.

ಕೆಲ ತಜ್ಞರು ಸರ್ಕಾರ ಬಜೆಟ್ ಪರವಾಗಿದ್ದು, ಇನ್ನೂ ಕೆಲವರು ಅನುದಾನ ಹಂಚಿಕೆ ಕುರಿತು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 6 ಲಕ್ಷ ಬಿ-ಖಾತಾ ಸೈಟ್‌ಗಳನ್ನು ಎ-ಖಾತಾ ಆಗಿ ಪರಿವರ್ತಿಸುವುದು, ಬನಶಂಕರಿ ಜಂಕ್ಷನ್‌ನಲ್ಲಿ 45 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಕೈವಾಕ್, ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದ್ದಾರೆ.

ಹಸಿರು ಬೆಂಗಳೂರಿಗಾಗಿ ಕುರಿತು ಮಾತನಾಡಿರುವ ಮತ್ತೊಬ್ಬ ತಜ್ಞರು, ಯಲಹಂಕದ 350 ಎಕರೆ ಜಾರಕಬಂಡೆ ಜಮೀನಿನಲ್ಲಿ ಕಬ್ಬನ್ ಪಾರ್ಕ್-ಲಾಲ್ ಬಾಗ್ ಮಾದರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಎಂಬ ಹೊಸ ಹೆಸರಿನೊಂದಿಗೆ ಟ್ರೀ ಪಾರ್ಕ್ ರಚನೆ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಪರಿಸರ ಸ್ನೇಹಿ ತಂತ್ರಜ್ಞಾನವನ್ನು ಪ್ರದರ್ಶಿಸಲು 105 ಎಕರೆ NGEF ಭೂಮಿಯಲ್ಲಿ ಸಿಂಗಾಪುರದ ಮಾದರಿಯಲ್ಲಿ ಟ್ರೀ ಪಾರ್ಕ್‌ಗಳನ್ನು ಗ್ರೀನ್ ಎಕ್ಸ್‌ಪೋ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ಬಜೆಟ್: ತವರು ಜಿಲ್ಲೆ ಹಾವೇರಿಗೆ ಸಿಎಂ ಬಂಪರ್ ಕೊಡುಗೆ

ತೋಟಗಾರಿಕೆ ಮತ್ತು ಅರಣ್ಯ ಅಧಿಕಾರಿಗಳು ಮಾತನಾಡಿ, ಸ್ಥಳೀಯರ ವಿರೋಧದಿಂದಾಗಿ 6 ತಿಂಗಳ ಹಿಂದೆ ಈ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಈ ಯೋಜನೆಗಳನ್ನು ಮತ್ತೆ ಬಜೆಟ್ ನಲ್ಲಿ ಸೇರಿಸಿರುವುದು ಆಶ್ಚರ್ಯವನ್ನು ತಂದಿದೆ ಎಂದು ಹೇಳಿದ್ದಾರೆ.

ಜನಾಗ್ರಹದ ನಾಗರಿಕ ಸಹಭಾಗಿತ್ವದ ಮುಖ್ಯಸ್ಥ ಶ್ರೀನಿವಾಸ್ ಅಲವಳ್ಳಿ ಮಾತನಾಡಿ, ಬಿಬಿಎಂಪಿ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳಿದ್ದವು, ಆದರೆ ಸಾಮರ್ಥ್ಯದ ಕೊರತೆಯಿಂದ ಭರವಸೆಗಳನ್ನು ಈಡೇರಿಸಲಾಗದ ಕೀರ್ತಿ ಸಿಎಂಗೆ ಸಿಕ್ಕಿದೆ. ಬೆಂಗಳೂರಿಗೆ ಬೇಕಿರುವುದು ಕೆರೆಗಳ ಪುನಶ್ಚೇತನಕ್ಕೆ ಅಪಾರ ಪ್ರಮಾಣದ ಹಣವಾಗಿದೆ. ಆದರೆ, ಅದನ್ನು ಈ ಬಾರಿಯ ಬಜೆಟ್ ನಲ್ಲಿ ನಾನು ನೋಡಲಿಲ್ಲ ಎಂದಿದ್ದಾರೆ.

ಬೆಂಗಳೂರಿನ ನೀರಿನ ಅಗತ್ಯತೆಗಳ ಕುರಿತು ಮಾತನಾಡಿದ್ದ ಬೊಮ್ಮಾಯಿಯವರು, ಇದಕ್ಕಾಗಿ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದಾಗಿ ಹೇಳಿದರು.

ಇದನ್ನೂ ಓದಿ: ರಾಜ್ಯ ಬಜೆಟ್ 2022-23: ಹೊಸ ಘೋಷಣೆಗಳ ಬಗ್ಗೆ ಇಲ್ಲಿದೆ ವಿವರ

ನಗರಕ್ಕೆ ಹೆಚ್ಚುವರಿಯಾಗಿ ನಿತ್ಯ 77.50 ಕೋಟಿ ಲೀಟರ್ ಕಾವೇರಿ ನೀರನ್ನು ತರುವ ರೂ. 5,550 ಕೋಟಿ ವೆಚ್ಚದ ಕಾವೇರಿ 5ನೇ ಹಂತದ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಇಲ್ಲಿಯವರೆಗೆ ರೂ.1,556 ಕೋಟಿ ವೆಚ್ಚ ಮಾಡಲಾಗಿದೆ. ಈ ಯೋಜನೆಯನ್ನು 2024-25ನೇ ಸಾಲಿನ ಅಂತ್ಯದೊಳಗೆ ಪೂರ್ಣಗೊಳಿಸುವ ಭರವಸೆಯನ್ನು ಇದೇ ವೇಳೆ ನೀಡಿದರು.

ಖ್ಯಾತ ವಾಸ್ತುಶಿಲ್ಪಿ ನರೇಶ್ ನರಸಿಂಹನ್ ಮಾತನಾಡಿ,  ಬಜೆಟ್ ಸಮಗ್ರ ಮತ್ತು ಕೇಂದ್ರೀಕೃತವಾಗಿದೆ. ಬೊಮ್ಮಾಯಿ ಅವರು ಪರಿಸರ ಮತ್ತು ಆರ್ಥಿಕತೆಯ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರಯತ್ನಿಸಿದ್ದಾರೆ ಮತ್ತು ಬೆಂಗಳೂರಿಗೆ ಹೆಚ್ಚಿನ ಗಮನ ನೀಡಿದ್ದಾರೆಂದು ತಿಳಿಸಿದರು.

ಜ್ಯುವೆಲ್ಲರಿ ಪಾರ್ಕ್
ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನವ ಕರ್ನಾಟಕ ನವಬಾರತ ನಿರ್ಮಾಣ ಎಂಬ ಧ್ಯೇಯದಡಿಯಲ್ಲಿ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಯನ್ನು ಯೋಜನಾ ಬಧ್ಧವಾಗಿ ಪರಿಸರ ಸ್ನೇಹಿ ನವನಗರಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಚಿನ್ನ ಮತ್ತು ಆಭರಣದ ಕುಶಲಕರ್ಮಿಗಳ ಹಾಗೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸೌಲಭ್ಯವನ್ನು ಒದಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯ ಬಜೆಟ್ 2022: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿ ಕೊಟ್ಟಿದ್ದೇಷ್ಟು?

ಈ ಘೋಷಣೆಗೆ ಪ್ರತಿಕ್ರಿಯೆ ನೀಡಿರುವ ತಜ್ಞರು, ಸ್ಥಳೀಯ ಕೈಗಾರಿಕೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಬಜೆಟ್ ನಲ್ಲೂ ಈ ಘೋಷಣೆಯನ್ನು ಮಾಡಲಾಗಿತ್ತು ಎಂದಿದ್ದಾರೆ.

ಬೆಂಗಳೂರಿಗೆ ಮುಖ್ಯಮಂತ್ರಿಗಳು ಘೋಷಿಸಿದ ಘೋಷಣೆಗಳು ಇಂತಿವೆ...
ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ರೂ. 15,267 ಕೋಟಿ ಅಂದಾಜು ವೆಚ್ಚದಲ್ಲಿ 2026ರ ಒಳಗೆ ಜಾರಿಗೆ ತರಲಾಗುತ್ತಿದೆ. 148 ಕಿ.ಮೀ. ಉದ್ದದ ನಾಲ್ಕು ಕಾರಿಡಾರ್‌ಗಳನ್ನು ನಿರ್ಮಿಸುವ ಈ ಯೋಜನೆಯಲ್ಲಿ ಚಿಕ್ಕಬಾಣಾವರ-ಬೈಯ್ಯಪ್ಪನಹಳ್ಳಿ ಕಾರಿಡಾರ್‌ನ ಸಿವಿಲ್ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರವೇ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ನಗರದ ರಸ್ತೆಗಳಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆ ಹಾಗೂ ಹಳೇ ಮದ್ರಾಸ್ ರಸ್ತೆಯ ಮೂಲಕ ಹಾದು ಹೋಗಿ ಹೊಸೂರು ರಸ್ತೆಯನ್ನು ಸೇರುವ ಫೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲಾಗುತ್ತದೆ. 73 ಕಿ.ಮೀ ಉದ್ದ ಹಾಗೂ 100 ಮೀ ಅಗಲದ ಈ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ವೆಚ್ಚವೂ ಸೇರಿ ರೂ. 21,091 ಕೋಟಿ ಬಂಡವಾಳ ಬೇಕಾಗುತ್ತದೆ. ಈ ಯೋಜನೆಗೆ ಈಗಾಗಲೇ ಅನುಮೋದನೆ ನಿಡಲಾಗಿದೆ. ವಿನ್ಯಾಸಗೊಳಿಸಿ, ನಿರ್ಮಿಸಿ. ಹಣಕಾಸು ಹೊಂದಿಸಿ, ನಿರ್ವಹಿಸಿ ಹಸ್ತಾಂತರಿಸುವ (ಡಿಬಿಎಫ್‌ಒಟಿ) ಮಾದರಿಯಲ್ಲಿ ಪ್ರಸಕ್ತ ವರ್ಷದಲ್ಲೇ ಈ ಯೋಜನೆಗೆ ಟೆಂಡರ್‌ ಕರೆದು ಚಾಲನೆ ನೀಡಲಾಗುತ್ತದೆ. ಗುತ್ತಿಗೆದಾರರೇ ಭೂ ಸ್ವಾಧೀನ ಮತ್ತು ನಿರ್ಮಾಣ ವೆಚ್ಚ ಭರಿಸಲಿದ್ದಾರೆ’ ಎಂದು ತಿಳಿಸಿದರು.

ಇದನ್ನೂ ಓದಿ: ಇದು ಬೆಳವಣಿಗೆ ಆಧಾರಿತ, ಸೂಕ್ಷ್ಮ ಬಜೆಟ್: ಸಿಎಂ ಬೊಮ್ಮಾಯಿ

ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ನಿವಾರಿಸಿ ಎಲ್ಲಾ ವಾಹನಗಳ ಸಿಗ್ನಲ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಲು ಗ್ರೇಡ್ ಸೆಪರೇಟರ್ ಮತ್ತು ಮೇಲುಸೇತುವೆ ನಿರ್ಮಾಣ ಮಾಡಬೇಕೆಂಬುದು ದಶಕಗಳ ಬೇಡಿಕೆ. ಬಿಬಿಎಂಪಿ, ಬಿಡಿಎ ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿಯಾಗಿ ಕಾಮಗಾರಿ ಅನುಷ್ಠಾನ ಮಾಡಲಾಗುತ್ತದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಬಿಡಿಎ ಇದುವರೆಗೆ 2671 ಎಕರೆ ಭೂಸ್ವಾಧೀನ ಮಾಡಿದೆ. ಇನ್ನೂ 1,297 ಎಕರೆ ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ಈ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಆಧುನಿಕ ಸ್ಮಾರ್ಟ್ ಸಿಟಿಯಾಗಿ ಈ ಬಡಾವಣೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಸರ್.ಎಂ.ವಿಶ್ವೇಶರಯ್ಯ, ಬನಶಂಕರಿ 6ನೇ ಹಂತ ಮತ್ತು ಅಂಜನಾಪುರ ಬಡಾವಣೆಗಳಲ್ಲಿನ ರಸ್ತೆ, ಚರಂಡಿಗಳು, ಒಳಚರಂಡಿ ಮತ್ತು ಕೊಳಚೆ ನೀರು ಸಂಸ್ಕರಣಾ ಘಟಕವನ್ನು (ಎಸ್‌ಟಿಪಿ) ರೂ.404 ಕೋಟಿ ವೆಚ್ಚದಲ್ಲಿ ಬಿಡಿಎ ವತಿಯಿಂದ ನಿರ್ಮಿಸಿ ಮುಂದಿನ ನಿರ್ವಹಣೆಗಾಗಿ ಬಿಬಿಎಂಪಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.


Stay up to date on all the latest ರಾಜ್ಯ news
Poll
Rajasthan Chief Minister Ashok Gehlot and Congress leader Sachin Pilot ( File Photo | PTI)

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯವು ಈ ವರ್ಷ ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಾನಿ ಮಾಡುತ್ತದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp