ಮೊದಲು ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಆದ್ಯತೆ, ನಂತರ ಶಿಕ್ಷಣಕ್ಕೆ ನೆರವು ನೀಡಲಾಗುತ್ತದೆ: ಸಚಿವ ಅಶ್ವತ್ಥ್ ನಾರಾಯಣ್
ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರೆಸುವಲ್ಲಿ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ನಡುವಲ್ಲೇ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್ ಅವರು ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರವು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ನಂತರ ಶಿಕ್ಷಣದ ಬಗ್ಗೆಯೂ ಕಾಳಜಿ ವಹಿಸಲಾಗುವುದು ಎಂದು ಹೇಳಿದ್ದಾರೆ.
Published: 06th March 2022 12:03 PM | Last Updated: 06th March 2022 12:03 PM | A+A A-

ಸಚಿವ ಅಶ್ವತ್ಥ್ ನಾರಾಯಣ್
ಬೆಂಗಳೂರು: ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರೆಸುವಲ್ಲಿ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ನಡುವಲ್ಲೇ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್ ಅವರು ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರವು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ನಂತರ ಶಿಕ್ಷಣದ ಬಗ್ಗೆಯೂ ಕಾಳಜಿ ವಹಿಸಲಾಗುವುದು ಎಂದು ಹೇಳಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ, ಈ ವರೆಗೂ ಕರ್ನಾಟಕದ 366 ವಿದ್ಯಾರ್ಥಿಗಳು ರಾಜ್ಯಕ್ಕೆ ಹಿಂತಿರುಗಿದ್ದಾರೆ. ಯುದ್ಧ ಪೀಡಿತ ರಾಷ್ಟ್ರದಲ್ಲಿ ರಾಜ್ಯದ ಇನ್ನೂ ಹಲವು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು, ಅವರನ್ನು ತಾಯ್ನಾಡಿಗೆ ಕರೆತರಲು ಪ್ರಯತ್ನಗಳನ್ನು ಮುಂದುವರೆದಿವೆ.
ಉಕ್ರೇನ್‌ನಲ್ಲಿ ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಹಲವಾರು ವಿದ್ಯಾರ್ಥಿಗಳು ಯುದ್ಧ ಪ್ರಾರಂಭವಾದ ನಂತರ ತಾಯ್ನಾಡಿಗೆ ಹಿಂದಿರುಗುತ್ತಿದ್ದಾರೆ. ಅವರ ಶಿಕ್ಷಣವನ್ನು ಮುಂದುವರಿಸಲು ಸರ್ಕಾರ ಸಹಾಯ ಮಾಡುತ್ತದೆಯೇ?
ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರವನ್ನು ಖಚಿತಪಡಿಸುವುದು ಮತ್ತು ಅವರನ್ನು ಮನೆಗೆ ಕರೆತರುವುದು ಸರ್ಕಾರದ ಆದ್ಯತೆಯಾಗಿದೆ. ಈಗ ಅದನ್ನು ಮಾಡಲಾಗುತ್ತದೆ. ಈ ಯುದ್ಧವು ಎಷ್ಟು ದಿನ ಮುಂದುವರಿಯುತ್ತದೆ ಎಂಬುದು ತಿಳಿದಿಲ್ಲ. ಯುದ್ಧ ಅಂತ್ಯಗೊಂಡ ಬಳಿಕ ಅವರು ಮತ್ತೆ ಉಕ್ರೇನ್"ಗೆ ಹಿಂತಿರುಗುತ್ತಾರೆಯೇ ಎಂಬುದನ್ನು ನೋಡಬೇಕಿದೆ.
ಸರ್ಕಾರ ಪ್ರಸ್ತುತ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಆದ್ಯತೆ ನೀಡಿದೆ. ನಂತರ ಶಿಕ್ಷಣದ ನೆರವು ಕುರಿತು ಚಿಂತನೆ ನಡೆಸಲಾಗುತ್ತದೆ. ಯುದ್ಧವು ಎಷ್ಟು ದಿನ ನಡೆಯುತ್ತದೆ ಎಂಬುದು ಸ್ಪಷ್ಟವಾಗಿಲ್ಲ. ಬೆಳವಣಿಗೆಯನ್ನು ಕಾದುನೋಡಬೇಕಿದೆ.
ಆ ನಿಟ್ಟಿನಲ್ಲಿ ಸರಕಾರದಲ್ಲಿ ಯಾವ ಚಿಂತನೆ ನಡೆಸಿದೆ?
ಅವಶ್ಯಕತೆ ಇದ್ದಾಗ ಸರ್ಕಾರ ಸ್ಪಂದಿಸಬೇಕು ಮತ್ತು ನಾವು ಅದನ್ನು ಮಾಡುತ್ತೇವೆ. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಸಹಾಯ ಮಾಡಲಿದೆ.
ಉನ್ನತ ಶಿಕ್ಷಣ ಇಲಾಖೆಗೆ ಬಜೆಟ್ ಹಂಚಿಕೆ ಕುರಿತು ನಿಮ್ಮ ಅನಿಸಿಕೆ?
ನಾವು ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ ಮತ್ತು ಡಿಜಿಟಲೀಕರಣವು ಕಲಿಕೆಯ ಗುಣಮಟ್ಟವನ್ನು ಸುಧಾರಿಸಿದೆ. ನಾವೀನ್ಯತೆ, ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಸ್ಟಾರ್ಟ್‌ಅಪ್‌ಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕ ಇತರರಿಗಿಂತ ಮುಂದಿದೆ. ಶಿಕ್ಷಣದ ಗುಣಮಟ್ಟ ಸುಧಾರಿಸಬೇಕಾಗಿದೆ ಮತ್ತು ಎಲ್ಲಾ ಪದವೀಧರರು ಉದ್ಯೋಗ ಮತ್ತು ಉದ್ಯಮಕ್ಕೆ ಸಿದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೈಗಾರಿಕೆಗಳು ಮತ್ತು ಸಂಸ್ಥೆಗಳ ನಡುವೆ ಹೆಚ್ಚಿನ ಸಹಯೋಗದ ಅಗತ್ಯವಿದೆ.
ಶೈಕ್ಷಣಿಕ ಮತ್ತು ಮೂಲಸೌಕರ್ಯಗಳ ವಿಚಾರದಲ್ಲಿ ಬೆಂಬಲ ಮತ್ತು ಸುಗಮಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು, ಪ್ರಯತ್ನಿಸುತ್ತಿದ್ದೇವೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿ ಕುರಿತಂತೆಯೂ ಚಿಂತನೆ ನಡೆಸಲಾಗುತ್ತಿದೆ.
ಬಜೆಟ್‌ನಲ್ಲಿ ಉದ್ಯೋಗ ನೀತಿಯ ಬಗ್ಗೆಯೂ ಪ್ರಸ್ತಾಪಿಸಲಾಗಿದೆ...
ಹೌದು. ಬೇಡಿಕೆ, ಕೌಶಲ್ಯ ಮತ್ತು ಅಗತ್ಯವಿರುವ ಅರ್ಹತೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಒದಗಿಸಲು ಎಲ್ಲಾ ಪಾಲುದಾರರನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸಲು ನಾವು ಸರಳ ಪೋರ್ಟಲ್‌ನೊಂದಿಗೆ ಹೊರಬಂದಿದ್ದೇವೆ. ಇದು ಯುವಕರು ತಮ್ಮ ಮೂಲಭೂತ ಕೋರ್ಸ್‌ಗಳ ಜೊತೆಗೆ ಆ ದಿಕ್ಕಿನಲ್ಲಿ ಕಲಿಯಲು ಪ್ರಾರಂಭಿಸಲು ಸಹಾಯ ಮಾಡುತ್ತದೆ.
ಇದಕ್ಕೆ ಅಗತ್ಯವಿರುವ ಸಿಬ್ಬಂದಿ ಹಾಗೂ ಮೂಲಸೌಕರ್ಯ ಕಲ್ಪಿಸುವ ಮೂಲಕ ಸರಕಾರ ಅನುಕೂಲ ಮಾಡಿಕೊಡುತ್ತಿದೆ. ರಾಜ್ಯವು ಅವಕಾಶಗಳ ಒದಗಿಸುವ ನಾಡಾಗಿದೆ. ಲಭ್ಯವಿರುವ ಸಂಪನ್ಮೂಲಗಳು ಅವಶ್ಯಕತೆಗಳನ್ನು ಪೂರೈಕೆಯನ್ನು ನಾವು ಖಚಿತಪಡಿಸಿಕೊಳ್ಳಬೇಕು. ಬೆಂಗಳೂರಿನ ಹೊರಗೂ ಕೈಗಾರಿಕಾ ಕ್ರಮಗಳ ಕೈಗೊಳ್ಳಲು ಚಿಂತನೆ ನಡೆಸುತ್ತಿದ್ದು, ಈ ಕುರಿತು ಕ್ರಮಗಳ ಕೈಗೊಳ್ಳಲಾಗುತ್ತಿದೆ.
ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆಯೂ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಕಾಲೇಜುಗಳ ಆಯ್ಕೆ ಹೇಗೆ ಮಾಡಲಾಗುತ್ತದೆ?
ಪ್ರದೇಶ ಮತ್ತು ಪ್ರವೇಶಗಳ ಸಂಖ್ಯೆಯನ್ನು ಆಧರಿಸಿ ಕಾಲೇಜುಗಳ ಆಯ್ಕೆ ಮಾಡಲಾಗುತ್ತದೆ. ಏಳು ಕಾಲೇಜುಗಳನ್ನು ಆಯ್ಕೆ ಮಾಡಲಾಗುತ್ತದೆ. ಉಳಿದ ಕಾಲೇಜುಗಳನ್ನು ಸಹ ಸೂಪರ್ 30ಗೆ ಸೇರಿಸಲಾಗುವುದು. ಸರ್ಕಾರ, ವಿಟಿಯು ಮತ್ತು ಕೈಗಾರಿಕೆಗಳು ನಮ್ಮ ಎಲ್ಲಾ ಸರ್ಕಾರಿ ಕಾಲೇಜುಗಳು ಸುಸ್ಥಿತಿಯಲ್ಲಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡುತ್ತವೆ.
ಈ ಸಂಸ್ಥೆಗಳು ಆಯಾ ಜಿಲ್ಲೆಗಳಿಗೆ ಪ್ರತಿನಿಧಿಯಂತೆ ಕಾರ್ಯನಿರ್ವಹಿಸಲಿವೆ. ಈ ಕಾಲೇಜುಗಳು ತಂತ್ರಜ್ಞಾನ, ನಾವೀನ್ಯತೆ ಮತ್ತು ಸ್ಟಾರ್ಟ್-ಅಪ್ ಹಬ್‌ಗಳ ಪಾತ್ರವನ್ನು ವಹಿಸಬೇಕು. ಸಂಸ್ಥೆಗಳನ್ನು ನಿರ್ಮಿಸಲು ಕಾಲಾವಕಾಶ ಬೇಕಾಗುತ್ತದೆ. ಆ ದಿಕ್ಕಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
ಬಜೆಟ್‌ನಲ್ಲಿ ಬೆಂಗಳೂರಿನತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಇದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಕಾರಣವೇ?
ನಗರವು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ಮತ್ತು ನಮ್ಮ ಆರ್ಥಿಕತೆಯನ್ನು ಉತ್ತಮಗೊಳಿಸಬೇಕಾದರೆ, ನಾವು ಬೆಂಗಳೂರಿನ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳತ್ತ ಗಮನ ಹರಿಸಬೇಕು ಎಂದಿದ್ದಾರೆ.