ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭ: ಬೊಮ್ಮಾಯಿ
2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ಮತ ಹಾಕಿ ಮತ್ತೂ 5 ವರ್ಷ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಲಿದ್ದಾರೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Published: 10th March 2022 11:16 PM | Last Updated: 10th March 2022 11:16 PM | A+A A-

ಬೊಮ್ಮಾಯಿ
ಬೆಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ರಾಜ್ಯ ಬಿಜೆಪಿ ಪಾಲಿಗೆ ಲಾಭವಾಗಿ ಪರಿಣಮಿಸಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: 'ಕರ್ನಾಟಕದಿಂದ ಮತ್ತೊಮ್ಮೆ ಆರಿಸಿ ಬರುವುದಾದರೆ ಏಕೆ ಬೇಡ ಎನ್ನಲಿ': ರಾಜ್ಯಸಭೆ ಚುನಾವಣೆ ಕುರಿತು ನಿರ್ಮಲಾ ಸೀತಾರಾಮನ್
ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪರ ಜನರು ವಾಲಿರುವುದರಿಂದ ರಾಜ್ಯದ ಮತದಾರರ ಮೇಲೂ ಅದರ ಪ್ರಭಾವ ಪಕ್ಷದ ಪರ ಬೀರಲಿದೆ ಎಂದು ಬೊಮ್ಮಾಯಿ ಆಶಿಸಿದ್ದಾರೆ.
ಇದನ್ನೂ ಓದಿ: ಉಕ್ರೇನಿನಿಂದ ವಾಪಸ್ ಬಂದ ವಿದ್ಯಾರ್ಥಿನಿಯರನ್ನು ಭೇಟಿ ಮಾಡಿ ನೆರವಿನ ಭರವಸೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ್
2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ಮತ ಹಾಕಿ ಮತ್ತೂ 5 ವರ್ಷ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಲಿದ್ದಾರೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಅಗತ್ಯ: ಸಿಜೆಐ ಎನ್.ವಿ.ರಮಣ
ಇದೇ ವೇಳೆ ಪಂಚರಾಜ್ಯ ಚುನಾವಣೆಯಲ್ಲಿ ಇಡೀ ದೇಶದ ನಾಯಕ ಒಬ್ಬರೇ ಅದು ನರೇಂದ್ರ ಮೋದಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ ತಮಿಳುನಾಡು ಸಚಿವರ ಪುತ್ರಿ ಮತ್ತು ಅಳಿಯ!